Advertisement

ಶ್ರೀನಗರ: ಕಾಶ್ಮೀರಿ ಪಂಡಿತರ ವರ್ಗಾವಣೆ ಶುರು

09:10 PM May 23, 2022 | Team Udayavani |

ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ನೌಕರ ರಾಹುಲ್‌ ಭಟ್‌ರನ್ನು ಉಗ್ರರು ಹತ್ಯೆ ಮಾಡಿದ ಬೆನ್ನಲ್ಲೇ, ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪಂಡಿತರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾವಣೆ ಮಾಡುವ ಕೆಲಸ ಆರಂಭವಾಗಿದೆ. ಪಂಡಿತರ ರಕ್ಷಣೆ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Advertisement

ಪ್ರಧಾನಿಯವರ ಕಾಶ್ಮೀರಿ ಪಂಡಿತರ ಪುನರ್ವಸತಿ ಯೋಜನೆಯಲ್ಲಿ ಇಲಾಖೆಗೆ ನೇಮಕವಾಗಿರುವ ಕಾಶ್ಮೀರಿ ಪಂಡಿತರನ್ನು ಶಿಕ್ಷಣ ಇಲಾಖೆಯು ವರ್ಗಾವಣೆ ಮಾಡುತ್ತಿದೆ. ಶಿಕ್ಷಕರು, ಪ್ರಯೋಗಾಲಯ ಸಹಾಯಕರು, ಕಿರಿಯ ಸಹಾಯಕರನ್ನು ಹೆಚ್ಚು ಸುರಕ್ಷಿತ ಸ್ಥಳ ಅಥವಾ ಅವರ ಮನೆಗೆ ಸಮೀಪದ ಸ್ಥಳಕ್ಕೆ ವರ್ಗಾವಣೆ ಮಾಡಲಾಗುತ್ತಿದೆ.

ಗಂಡ-ಹೆಂಡತಿ ಇಬ್ಬರೂ ಇಲಾಖೆಯಲ್ಲಿದ್ದರೆ ಅವರನ್ನು ಒಂದೇ ಕಚೇರಿಯಲ್ಲಿ ನೇಮಕ ಮಾಡಲು ಯತ್ನಿಸಲಾಗುತ್ತಿದೆ. ಈಗಾಗಲೇ 50ಕ್ಕೂ ಅಧಿಕ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಇನ್ನೂ ಅನೇಕರ ವರ್ಗಾವಣೆ ಪ್ರಗತಿಯಲ್ಲಿದೆ ಎಂದು ತಿಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 4000 ಕಾಶ್ಮೀರಿ ಪಂಡಿತರು ಪುನರ್ವಸತಿ ಯೋಜನೆಯಲ್ಲಿ ಸರ್ಕಾರಿ ಕೆಲಸ ಪಡೆದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next