Advertisement

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

11:20 PM Jan 09, 2025 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಬೆದರಿಕೆ ಒಡ್ಡಿದ ಆರೋಪ ಹೊರಿಸಿ ಎಡಿಜಿಪಿ ಚಂದ್ರಶೇಖರ್‌ ದಾಖಲಿಸಿರುವ ಎಫ್ಐಆರ್‌ಗೆ ಸಂಬಂಧಿಸಿದಂತೆ ಜನವರಿ 30ರ ವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಹೈಕೋರ್ಟ್‌ ನಿರ್ದೇಶಿಸಿದೆ.

Advertisement

ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ವಿಶೇಷ ಸರಕಾರಿ ಅಭಿಯೋಜಕರು ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ನೇತೃತ್ವದ ನ್ಯಾಯಪೀಠ ಈ ಮೊದಲು ತಾನು ನೀಡಿದ್ದ ಮಧ್ಯಾಂತರ ಆದೇಶವನ್ನು ವಿಸ್ತರಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next