Advertisement
ಫೆ. 20ರ ಬೆಳಗ್ಗೆ 10ಕ್ಕೆ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯುವ ಬೂತ್ ಸಮಿತಿ ಸಮಾ ವೇಶ, ಮಧ್ಯಾಹ್ನ 2ಕ್ಕೆ ಬೈಂದೂರಿನಲ್ಲಿ ಬೃಹತ್ ವಾಹನ ಜಾಥಾ ಹಾಗೂ 2.30ಕ್ಕೆ ಮುಳ್ಳಿಕಟ್ಟೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯತಂಡ ಮತ್ತು ಪ್ರಮುಖರ ಸಭೆಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಬೂತ್ ಸಮಿತಿ ಸಮಾವೇಶದಲ್ಲಿ 15,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಫೆ.16ರಂದು ಕಾಪು, ಕಾರ್ಕಳ, ಫೆ.17ರಂದು ಬೈಂದೂರು, ಕುಂದಾಪುರ, ಉಡುಪಿ ನಗರ, ಉಡುಪಿ ಗ್ರಾಮಾಂತರ ಮಂಡಲಗಳ ಸಭೆ ನಡೆಯಲಿದೆ ಎಂದರು.
Related Articles
Advertisement