Advertisement
ಪರಿಷತ್ ಸಭಾಪತಿ ನೇಮಕ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ನಡುವೆ ಮಾತುಕತೆ ನಡೆದಿದೆ. ಜೆಡಿಎಸ್‌ನ ಹಿರಿಯ ಶಾಸಕ ಬಸವರಾಜ್ ಹೊರಟ್ಟಿ ಅವರ ಮಾಹಿತಿಯನ್ನು ಜೆ.ಪಿ. ನಡ್ಡಾ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇವೇಗೌಡರೊಂದಿಗೆ ನಡೆದಿರುವ ಮಾತುಕತೆ ಆಧಾರದಲ್ಲಿ ಜೆ.ಪಿ. ನಡ್ಡಾ, ಅವರು ಬಸವರಾಜ ಹೊರಟ್ಟಿ ಅವರ ವಿವರ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Related Articles
ಸಭಾಪತಿ ವಿರುದ್ಧ ಬಿಜೆಪಿ ಸದಸ್ಯರು ನೀಡಿದ್ದ ಅವಿಶ್ವಾಸ ನಿರ್ಣಯದ ನೋಟಿಸ್ ನಿಯಮ ಪ್ರಕಾರ ಇಲ್ಲ ಎನ್ನುವ ಕಾರಣಕ್ಕೆ ಅದನ್ನು ತಳ್ಳಿ ಹಾಕಿರು ವುದಾಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಕಡತದಲ್ಲಿ ದಾಖಲಿಸಿದ್ದಾರೆ. ಆದರೆ ಡಿ. 15ರಂದು ಪರಿಷತ್ತಿನಲ್ಲಿ ಗಲಭೆ ನಡೆದ ಬಳಿಕ ಜೆಡಿಎಸ್‌ನ 14 ಸದಸ್ಯರು ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ತಮ್ಮ ಬೆಂಬಲ ಇದೆ ಎಂದು ಸಹಿ ಮಾಡಿ ಪರಿಷತ್ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದರು. ಈ ಬಗ್ಗೆ ಸಭಾಪತಿ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ಬಿಜೆಪಿ ಸದಸ್ಯರ ನೋಟಿಸ್ ತಿರಸ್ಕೃತ ಗೊಂಡಿದ್ದರೂ ಜೆಡಿಎಸ್ ಸದಸ್ಯರ ಅವಿಶ್ವಾಸ ನಿರ್ಣಯದ ನೋಟಿಸ್ ಆಧಾರದಲ್ಲಿ ಸಭಾಪತಿ ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಅಥವಾ ತಮಗೆ ಬಹುಮತ ಇಲ್ಲ ಎನ್ನುವುದನ್ನು ಮನಗಂಡು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವುದು ಬಿಜೆಪಿ ಸದಸ್ಯರ ವಾದ.
Advertisement
ಪ್ರಧಾನಿ ಮೋದಿಗೆ ಕರೆಸಭಾಪತಿ ಬದಲಾಯಿಸಲು ಬಿಜೆಪಿ ನಾಯಕರು ಜೆಡಿಎಸ್ ಬೆಂಬಲ ಕೋರಿದಾಗ ಸದಸ್ಯರು, “ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ನೀಡುವುದಾದರೆ ಮಾತ್ರ ಬಿಜೆಪಿ ನಡೆಯನ್ನು ಬೆಂಬಲಿಸಬೇಕು’ ಎಂದು ವರಿಷ್ಠ ದೇವೇಗೌಡರನ್ನು ಆಗ್ರಹಿಸಿದ್ದರು. ಹೀಗಾಗಿ ದೇವೇಗೌಡರು ಈ ವಿಚಾರವಾಗಿ ಚರ್ಚಿಸಲು ಪ್ರಧಾನಿ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಪ್ರಧಾನಿ ಮೋದಿ ಈ ವಿಷಯದ ಕುರಿತು ನಡ್ಡಾ ಅವರೊಂದಿಗೆ ಚರ್ಚಿಸಲು ಸೂಚಿಸಿದ್ದರು ಎನ್ನಲಾಗಿದೆ. ಸಿಎಂ ವಿರುದ್ಧ ಶಾಸಕರು ಗರಂ
ಬೆಂಗಳೂರು: ಬಜೆಟ್ ಮಂಡನೆಗೆ ಮುನ್ನ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕರೆದ ವಿಭಾಗವಾರು ಶಾಸಕರ ಸಭೆಯಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧವೇ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಸಿಎಂ ಬಿಎಸ್‌ವೈ ಆಡಳಿತಕ್ಕೆ ಚುರುಕು ನೀಡಿ ಅಭಿವೃದ್ಧಿ ವೇಗ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಸೋಮವಾರ ಬಿಎಸ್‌ವೈ ಅವರು ಕರಾವಳಿ, ಕಲ್ಯಾಣ ಕರ್ನಾಟಕ, ಮುಂಬಯಿ ಕರ್ನಾಟಕ, ಮತ್ತು ಮಧ್ಯ ಕರ್ನಾಟಕ ಭಾಗದ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಯಡಿಯೂರಪ್ಪ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಮತ್ತು ಆಡಳಿತದಲ್ಲಿ ಇತರರ ಹಸ್ತಕ್ಷೇಪ ಹೆಚ್ಚಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಕರುಣಾಕರ ರೆಡ್ಡಿ ಸಹಿತ ಕೆಲವು ಹಿರಿಯ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ನಡುವೆ ಶಾಸಕರ ಸಭೆ ಕರೆದಿರುವುದಕ್ಕೆ ಹಲವು ಶಾಸಕರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ನಿರ್ಲಕ್ಷಿಸಬೇಡಿ: ಕರಾವಳಿ ಶಾಸಕರ ಮನವಿ
ಕರಾವಳಿ ಶಾಸಕರು ಸರಕಾರಕ್ಕೆ ಮುಜುಗರ ತರುವುದಿಲ್ಲ. ಆದರೆ ನಮ್ಮನ್ನು ನಿರ್ಲಕ್ಷ್ಯ ಮಾಡ ಬಾರದು ಎಂದು ದಕ್ಷಿಣ ಕನ್ನಡ, ಉಡುಪಿಯ ಬಿಜೆಪಿ ಶಾಸಕರು ಸಿಎಂಗೆ ಮನವಿ ಮಾಡಿದ್ದಾರೆ. ನಾವು ಶಿಸ್ತಿನಿಂದ ಇರುತ್ತೇವೆ ಎಂಬ ಕಾರಣಕ್ಕೆ ಹಲವು ಬಾರಿ ನಮ್ಮನ್ನು ನಿರ್ಲಕ್ಷಿಸಲಾಗಿದೆ. ಆದರೆ ಎಲ್ಲದಕ್ಕೂ ಸುಮ್ಮನೆ ಇರುತ್ತೇವೆ ಎಂದು ಅರ್ಥ ಅಲ್ಲ. ಕರಾವಳಿ ಭಾಗಕ್ಕೆ ವಿಶೇಷ ಯೋಜನೆ, ಅನುದಾನ ನೀಡ ಬೇಕು ಎಂದು ಮನವಿ ಮಾಡಿದ್ದಾರೆ. ಕರಾವಳಿಯ ರಾ.ಹೆ. ಯೋಜನೆಗಳಿಗೆ ರಾಜ್ಯದ ಪಾಲಿನ ಹಣ ಬಿಡುಗಡೆಗೊಳಿಸಬೇಕು. ರಾ.ಹೆ. ಪ್ರಾಧಿ ಕಾರದ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ; ಕರಾವಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸುವಂತೆ, ಡೀಮ್ಡ್ ಫಾರೆಸ್ಟ್, ಕುಮ್ಕಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಸಿಎಂ ಅಗತ್ಯ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.