Advertisement

ಯಾವ ದೂರೂ ಬಂದಿಲ್ಲ: ಜಾಕ್ವೆಲಿನ್‌ ಪರ ವಕೀಲ

06:29 PM Aug 18, 2022 | Team Udayavani |

ಮುಂಬೈ: ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರ್‌ ಅವರ 215 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್‌ ಅವರನ್ನು ಜಾರಿ ನಿರ್ದೇಶನಾಲಯ ಆರೋಪಿ ಎಂದು ಹೆಸರಿಸಿದ ಬೆನ್ನಲ್ಲೇ ನಟಿ ಪರ ವಕೀಲರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement

“ಈ ರೀತಿಯ ವರದಿಗಳು ಸುದ್ದಿ ಮಾಧ್ಯಮಗಳಲ್ಲಿ ಬಂದಿವೆಯೇ ಹೊರತು ಜಾಕ್ವೆಲಿನ್‌ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದಾಗಲೀ ಅಥವಾ ನ್ಯಾಯಾಲಯದಿಂದಾಗಿ ಯಾವುದೇ ದೂರು ಬಂದಿಲ್ಲ’ ಎಂದು ವಕೀಲರು ತಿಳಿಸಿದ್ದಾರೆ.

“ಜಾಕ್ವೆಲಿನ್‌ ಅವರು ಈ ಪ್ರಕರಣದಲ್ಲಿ ಸಂತ್ರಸ್ತೆಯಾಗಿದ್ದಾರೆ. ನಾವು ಇ.ಡಿ. ಸಲ್ಲಿಸಿರುವ ಆರೋಪ ಪಟ್ಟಿಯ ಪ್ರತಿಯನ್ನು ಕೇಳಿ ಪಟಿಯಾಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದೇವೆ’ ಎಂದೂ ವಕೀಲರು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next