Advertisement

ಬಹುಕೋಟಿ ವಂಚನೆ: ಎರಡನೇ ಬಾರಿ ವಿಚಾರಣೆಗೆ ಹಾಜರಾದ ಜಾಕ್ವೆಲಿನ್ ಫರ್ನಾಂಡಿಸ್

05:15 PM Sep 19, 2022 | Team Udayavani |

ನವದೆಹಲಿ: ಆರೋಪಿ ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದ ಬಹುಕೋಟಿ ವಂಚನೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್  ಅವರು ಸೋಮವಾರ ಆರ್ಥಿಕ ಅಪರಾಧ ವಿಭಾಗದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರಕರಣದಲ್ಲಿ ಪಾತ್ರಕ್ಕಾಗಿ ನಟಿಯನ್ನು ದೆಹಲಿ ಪೊಲೀಸರು ವಿಚಾರಣೆಗೆ ಕರೆಸಿರುವುದು ಇದು ಎರಡನೇ ಬಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಮಂದಿರ ಮಾರ್ಗದಲ್ಲಿರುವ ಆರ್ಥಿಕ ಅಪರಾಧ ವಿಭಾಗದ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಬುಧವಾರ, ಚಂದ್ರಶೇಖರ್‌ಗೆ ನಟಿಯನ್ನು ಪರಿಚಯಿಸಿದ ಪಿಂಕಿ ಇರಾನಿಯೊಂದಿಗೆ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಎಂಟು ಗಂಟೆಗಳ ಕಾಲ ಪ್ರಶ್ನಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next