Advertisement

Video: ಜಾಕ್ವೆಲಿನ್ ಫರ್ನಾಂಡಿಸ್ ವಾಸವಿದ್ದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ…

11:24 AM Mar 07, 2024 | Team Udayavani |

ಮುಂಬಯಿ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Advertisement

ನಟಿಯ ಮನೆ 15ನೇ ಮಹಡಿಯಲ್ಲಿದ್ದು, 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದ್ದು ಅಗ್ನಿಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದೆ.

ಅವಘಡದಲ್ಲಿ ನಟಿ ಸೇರಿದಂತೆ ಕಟ್ಟದಲ್ಲಿದ್ದ ಯಾರಿಗೂ ಯಾವುದೇ ತೊಂದರೆ ಆಗಲಿಲ್ಲ ಎಂದು ಹೇಳಲಾಗಿದೆ, ಘಟನೆ ನಡೆದ ಕೂಡಲೇ ಕಟ್ಟದಲ್ಲಿದ್ದ ಜನರನ್ನು ಸುರಕ್ಷಿತವಾಗಿ ಹೊರಗಡೆ ಕರೆತರಲಾಗಿದೆ.

ಘಟನೆಗೆ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Tragedy: ಮೊಬೈಲ್ ಬಿಡು ಅಂದಿದ್ದಕ್ಕೆ ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ

Advertisement

Advertisement

Udayavani is now on Telegram. Click here to join our channel and stay updated with the latest news.

Next