ದುಬೈ: ಭಾರತದ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ ಅವರು ನೂತನ ಐಸಿಸಿ ಟೆಸ್ಟ್ ಬೌಲರ್ ರ್‍ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನಕ್ಕೆ ಜಾರಿದ್ದಾರೆ.
ಜಡೇಜ ಅವರ ತಂಡಸದಸ್ಯ ಆರ್. ಅಶ್ವಿನ್ ಅವರು ಮೂರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅಗ್ರಸ್ಥಾನವನ್ನು ಇಂಗ್ಲೆಂಡಿನ ವೇಗಿ ಜೇಮ್ಸ್ ಆ್ಯಂಡರ್ಸನ್ ಅಲಂಕರಿಸಿದ್ದಾರೆ.
ಲಾರ್ಡ್ಸ್‌ನಲ್ಲಿ ನಡೆದ ವೆಸ್ಟ್‌ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ ಹಿನ್ನೆಲೆಯಲ್ಲಿ ಆ್ಯಂಡರ್ಸನ್ ಅಗ್ರಸ್ಥಾನಕ್ಕೇರುವಂತಾಯಿತು. ಈ ಪಂದ್ಯವನ್ನು ಇಂಗ್ಲೆಂಡ್ 9 ವಿಕೆಟ್‌ಗಳಿಂದ ಜಯಿಸಿತಲ್ಲದೇ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿತ್ತು.ಬ್ಯಾಟ್ಸ್‌ಮನ್ ಪಟ್ಟಿಯಲ್ಲಿ ಚೇತೇಶ್ವರ ಪೂಜಾರ ನಾಲ್ಕನೇ ರ್‍ಯಾಂಕ್ ಹೊಂದಿದ್ದರೆ ವಿರಾಟ್ ಕೊಹ್ಲಿ ಆರನೇ ರ್‍ಯಾಂಕ್ ಹೊಂದಿದ್ದಾರೆ. ಕೆಎಲ್ ರಾಹುಲ್ ಮತ್ತು ಅಜಿಂಕ್ಯ ರಹಾನೆ ಒಂದು ಸ್ಥಾನ ಮೇಲಕ್ಕೇರಿ ಅನುಕ್ರಮವಾಗಿ 9 ಮತ್ತು 10ನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯದ ಸ್ಟೀವನ್ ಸ್ಮಿತ್ ಬ್ಯಾಟ್ಸ್‌ಮನ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆಲ್‌ರೌಂಡರ್ ಪಟ್ಟಿಯಲ್ಲಿ ಸ್ಪಿನ್‌ದ್ವಯರಾದ ಜಡೇಜ ಮತ್ತು ಅಶ್ವಿನ್ ಅವರು ತಮ್ಮ ದ್ವಿತೀಯ ಮತ್ತು ಮೂರನೇ ಸ್ಥಾನವನ್ನು ಯಾರಿಗೂ ಬಿಟ್ಟುಕೊಟ್ಟಿಲ್ಲ.