Advertisement

ಜಾಫ‌ರ್‌ ಷರೀಫ್ ಇನ್ನಿಲ್ಲ;ರೈಲ್ವೆ ಸಚಿವರಾಗಿ ಕೀರ್ತಿ ಸಂಪಾದಿಸಿದ್ದರು

06:00 AM Nov 26, 2018 | Team Udayavani |

ಬೆಂಗಳೂರು: ಕೇಂದ್ರದ ಮಾಜಿ ರೈಲ್ವೆ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಸಿ.ಕೆ. ಜಾಫ‌ರ್‌ ಷರೀಫ್ (85) ಭಾನುವಾರ ಮಧ್ಯಾಹ್ನ ನಿಧನರಾದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯಾಹ್ನ ವೇಳೆಗೆ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು.

Advertisement

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್‌ ಪಕ್ಷದ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಜಾಫ‌ರ್‌ ಷರೀಫ್ ಅವರ ಅಂತಿಮ ದರ್ಶನ ಪಡೆದರು.

ನಂತರ ಅವರ ಪಾರ್ಥಿವ ಶರೀರವನ್ನು ಫ್ರೆàಜರ್‌ ಟೌನ್‌ನಲ್ಲಿರುವ ಅವರ ನಿವಾಸಕ್ಕೆ ರವಾನಿಸಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ಅವರ ಮನೆಯಿಂದ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕಂಟೋನ್ಮೆಂಟ್‌ ಬಳಿ ಇರುವ ಹಜ್‌ ಭವನಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಇಸ್ಲಾಂ ಧರ್ಮದ ಪ್ರಕಾರ ಮಧ್ಯಾಹ್ನ 1.30ರ ಸುಮಾರಿಗೆ ನಂದಿದುರ್ಗ ರಸ್ತೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ದುರ್ಗ ಮೂಲದವರು:
ಜಾಫ‌ರ್‌ ಷರೀಫ್ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯವರಾಗಿದ್ದರೂ, ಬೆಂಗಳೂರಿನಲ್ಲಿಯೇ ರಾಜಕೀಯ ಜೀವನ ಆರಂಭಿಸಿ ಇಲ್ಲಿಯೇ ನೆಲೆಯೂರಿದ್ದರು. ಎಂಟು ಬಾರಿ ಲೋಕಸಭಾ ಸದಸ್ಯರಾಗಿದ್ದ ಅವರು, ರೈಲ್ವೆ ಸಚಿವರಾಗಿ ರಾಜ್ಯ ಹಾಗೂ ರಾಷ್ಟ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಜಾಫ‌ರ್‌ ಷರೀಫ್ ಅವರಿಗೆ ನಾಲ್ವರು ಮಕ್ಕಳಿದ್ದು, 1999ರಲ್ಲಿ ಕಿರಿಯ ಮಗ ನಿಧನರಾಗಿದ್ದರು. 2008ರಲ್ಲಿ ಅವರ ಪತ್ನಿ ನಿಧನ ಹೊಂದಿದ್ದರು. ಅಲ್ಲದೇ, 2009ರಲ್ಲಿ ಮತ್ತೂಬ್ಬ ಹಿರಿಯ ಮಗನನ್ನು ಕಳೆದುಕೊಂಡಿದ್ದರು.

ತಮ್ಮ ಮೊಮ್ಮಗ ರೆಹಮಾನ್‌ ಷರೀಫ್ ಅವರನ್ನು ರಾಜಕೀಯದಲ್ಲಿ ಭದ್ರವಾಗಿ ನೆಲೆಯೂರಿಸಲು ಜಾಫ‌ರ್‌ ಷರೀಫ್ ಸಾಕಷ್ಟು ಪ್ರಯತ್ನ ಮಾಡಿದರು. ಎರಡು ಬಾರಿ ಬೆಂಗಳೂರಿನ ಹೆಬ್ಟಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದಲೇ ಸ್ಪರ್ಧಿಸಲು ಅವಕಾಶ ಕಲ್ಪಿಸಲು ರೆಹಮಾನ್‌ ಷರೀಫ್ ಅವರಿಗೆ ಜಯ ಗಳಿಸಲು ಸಾಧ್ಯವಾಗಲಿಲ್ಲ.

Advertisement

ಜಾಫ‌ರ್‌ ಷರೀಫ್ ಅವರ ಮೊಮ್ಮಗ ಸ್ಕಾಟ್‌ಲ್ಯಾಂಡ್‌ನ‌ಲ್ಲಿದ್ದು, ಅವರು ಬರಬೇಕಿದೆ. ಅಲ್ಲದೇ, ಕಾಂಗ್ರೆಸ್‌ನ ಹಿರಿಯ ಮುಖಂಡರು, ಅವರ ಬಂಧುಗಳು ಆಗಮಿಸಲಿದ್ದಾರೆ. ಸೋಮವಾರ ಮಧ್ಯಾಹ್ನ ಒಂದು ಗಂಟೆಗೆ ಖಾದ್ರಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಖುದ್ದೂªಸ್‌  ಸಾಬ್‌ ಖಬರಸ್ತಾನ್‌ನಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು.
– ಜಮೀರ್‌ ಅಹಮದ್‌ ಖಾನ್‌, ಹಜ್‌ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next