Advertisement

ಕಾಂಗ್ರೆಸ್ – ಜೆಡಿಎಸ್ ಅಪಪ್ರಚಾರವೇ ಬಿಜೆಪಿಗೆ ವರವಾಗಿದೆ: ಶೆಟ್ಟರ್

10:40 AM Dec 13, 2019 | keerthan |

ಹುಬ್ಬಳ್ಳಿ: ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಪಪ್ರಚಾರ ಮಾಡಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರದ ಜನರು ತಕ್ಕ ಉತ್ತರ ನೀಡಿದ್ದಾರೆ. ಇದು ಬಿಜೆಪಿಗೆ ದೊರೆತ ನೈತಿಕ ವಿಜಯ ಆಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

Advertisement

ವಿಧಾನಸಭಾ ಉಪಚುನಾವಣೆ ಹನ್ನೆರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಗದೀಶ ಶೆಟ್ಟ ನಿವಾಸ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವದ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಜೆಡಿಎಸ್ ಪಕ್ಷದವರು ಅಪಪ್ರಚಾರ ಮಾಡಿದ್ದರು. ಅವರ ಅಪಪ್ರಚಾರವೇ ಭಾರತೀಯ ಜನತಾ ಪಕ್ಷಕ್ಕೆ ಧನಾತ್ಮಕ ಪರಿಣಾಮ ಬೀರಿದ್ದು, ಜನರು ಎಲ್ಲವನ್ನೂ ಪರಿಶೀಲಿಸಿ ಸ್ಥಿರ ಸರ್ಕಾರಕ್ಕೆ ತಮ್ಮ ಅಮೂಲ್ಯವಾದ ಮತ ನೀಡಿ ಬಿಜೆಪಿಗೆ ಅಧಿಕಾರ ನೀಡಿದ್ದಾರೆ.ಎಲ್ಲಾಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿದರು.

ಯಡಿಯೂರಪ್ಪ ಅವರ ಶ್ರಮಕ್ಕೆ ಬಂದಿರುವ ಪ್ರತಿಫಲವೇ ಹನ್ನೆರಡು ಕ್ಷೇತ್ರದ ಗೆಲುವಿಗೆ ಕಾರಣವಾಗಿದೆ.ನನಗೆ ಕಾಗವಾಡ ಅಥಣಿ ಭಾಗದಲ್ಲಿ ಜವಾಬ್ದಾರಿ ಕೊಟ್ಟಿದ್ದರು. ಅಲ್ಲಿಯೇ ಟಿಕಾಣಿ ಹೂಡಿ ಗೆಲ್ಲಿಸಿಕೊಳ್ಳಲು ಸಾಧ್ಯವಾಯಿತು. ಜನಾದೇಶ ಬಿಜೆಪಿ ಪರವಾಗಿದೆ.

ಜೆಡಿಎಸ್ ಕಾಂಗ್ರೆಸ್ ಅಪ ಪ್ರಚಾರಕ್ಕೆ ಜನರೇ ತಕ್ಕ ಉತ್ತರ ನೀಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಚುನಾವಣೆಯಲ್ಲಿ ಕಾಂಗ್ರೆಸ್ ಪಾರ್ಟಿಗೆ ದೊಡ್ಡ ಮಟ್ಟದ ಹಿನ್ನಡೆಯಾಗಿದೆ. ಕಳೆದ ಸಮಾರಂಭದಲ್ಲಿ ನಾನು ಹೇಳಿದ್ದೇ ಸಿದ್ದರಾಮಯ್ಯ ಅವರು ಗೆಲ್ಲುವ ಬಗ್ಗೆ ಚಿಂತಿಸದೇ ವಿರೋಧ ಪಕ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಬೇಕು ಎಂದಿದ್ದೇ ಅದೇ ರೀತಿ ಮತದಾರರು ಅವರಿಗೆ ತಕ್ಕಪಾಠ ಕಲಿಸಿದ್ದಾರೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next