Advertisement
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಸಿನೋಗೆ ಹೋಗಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಹೇಳುವುದು ಎಷ್ಟು ಸರಿ ಎಂದರು.
Related Articles
Advertisement
ರಾಜಕೀಯ ಪಕ್ಷದವರೂ ಡ್ರಗ್ಸ್ ಗೆ ಅಡಿಕ್ಟ್ ಆಗಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ಆ ನಾಯಕರ ಹೆಸರು ಗೊತ್ತಿದ್ದರೆ ನೀವೇ ಹೇಳಿಬಿಡಿ ಎಂದು ಪತ್ರಕರ್ತರನ್ನೇ ಕೇಳಿದರು.
ಸಿಬಿಐಯನ್ನು ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಶೆಟ್ಟರ್, ಯಾರು ತಪ್ಪು ಮಾಡಿಲ್ಲವೋ ಅವರು ತನಿಖೆಗೆ ಹೆದರುವ ಅಗತ್ಯವಿಲ್ಲ. ಜಮೀರ್ ತಪ್ಪು ಮಾಡಿಲ್ಲ ಎಂದರೆ ಏಕೆ ಹೆದರಬೇಕು? ಯೋಗೀಶ ಗೌಡ ಪ್ರಕರಣದಲ್ಲೂ ತಪ್ಪು ಮಾಡದವರು ಹೆದರುವ ಅಗತ್ಯವಿಲ್ಲ ಎಂದರು.
ನಾನು ದೆಹಲಿಗೆ ಹಲವು ಅಭಿವೃದ್ಧಿ ಕೆಲಸಗಳ ಸಲುವಾಗಿ ಹೋಗಿದ್ದೆ. ಇದಕ್ಕೆ ಬೇರೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದರು.
ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆ ಸೇರಿ 17 ಮಂದಿ ಸಂಸದರಿಗೆ ಕೋವಿಡ್ ಸೋಂಕು ದೃಢ
ಧಾರವಾಡ-ಬೆಳಗಾವಿ-ಕಿತ್ತೂರು ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಶೀಘ್ರವೇ ಭೂಸ್ವಾಧೀನ ಮಾಡಿಕೊಂಡು ಕೇಂದ್ರಕ್ಕೆ ಸಲ್ಲಿಸಲಾಗುವುದು. ಅಳ್ನಾವರ ಮಾರ್ಗವಾಗಿ ಸಾಕಷ್ಟು ರೈಲುಗಳು ಸಂಚರಿಸಲಿವೆ. ಇನ್ನೂ ಕೆಲವೊಂದಿಷ್ಟು ರೈಲುಗಳನ್ನು ಆ ಮಾರ್ಗದ ಮೂಲಕ ಸಂಚರಿಸುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈರಣ್ಣ ಜಡಿ ನೇತೃತ್ವದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸಾಕಷ್ಟು ಕೆಲಸಗಳನ್ನು ಮಾಡಲಿದೆ. ಅಕಾಡೆಮಿಗೆ ಇನ್ನಷ್ಟು ಹೆಚ್ಚಿನ ಅನುದಾನದ ಸಲುವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಶೆಟ್ಟರ್ ಹೇಳಿದರು.
ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅರವಿಂದ ಬೆಲ್ಲದ, ಅಮೃಯ ದೇಸಾಯಿ ಇದ್ದರು