Advertisement

ನೆರೆ ಪರಿಹಾರಕ್ಕೆ ಕೇಂದ್ರದಿಂದ ಸಾವಿರ ಕೋಟಿ ಬಿಡುಗಡೆ: ಸಚಿವ ಜಗದೀಶ್ ಶೆಟ್ಟರ್

10:32 AM Aug 23, 2019 | Team Udayavani |

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿದ ವಿವಿಧ ಪ್ರದೇಶಗಳಿಗೆ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಭೇಟಿನೀಡಿ ಪರಿಶೀಲಿಸಿದರು. ಯಲ್ಲಾಪುರ, ಅಂಕೋಲ, ಕುಮಟಾ, ಕಾರವಾರದ ವಿವಿಧ ಪ್ರವಾಹ ಪರಿಸ್ಥಿತಿಯ ಅಧ್ಯಯನ ನಡೆಸಿ ಮುಖ್ಯಮಂತ್ರಿಯವರಿಗೆ ವರದಿ ನೀಡಲಾಗುವುದು ಎಂದರು.

Advertisement

ಈಗಾಗಲೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಹಾರ ಕ್ರಮ ಕೈಗೊಳ್ಳಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರಸ್ತುತ ಬಿಡುಗಡೆ ಮಾಡಲಾದ ಅನುದಾನ ಖರ್ಚಾದ ಬಳಿಕ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ರಾಜ್ಯಾದ್ಯಂತ ಪ್ರವಾಹ ಪೀಡಿತ ಪ್ರದೇಶಗಳ ಅಧ್ಯಯನ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಈಗಾಗಲೆ 1000ಕೋಟಿ ರೂ ಪರಿಹಾರ ಬಿಡುಗಡೆ ಮಾಡಿದೆ ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಎಸ್ಪಿ ಶಿವಪ್ರಕಾಶ ದೇವರಾಜ್, ಸ್ಥಳೀಯ ಜನಪ್ರತಿನಿಧಿಗಳು, ಮತ್ತಿತರರು ಉಪಸ್ಥಿತರಿದ್ದರು.

ಗಂಗಾವಳಿಗೆ ಶಾಶ್ವತ ಸೇತುವೆ
ಕಾರವಾರ : ರಾಮನಗುಳಿ ಕಲ್ಲೇಶ್ವರ ಬಳಿ ಗಂಗಾವಳಿ ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಪ್ರವಾಹದಲ್ಲಿ ಕೊಚ್ಚಿಹೋದ ಹಿನ್ನೆಲೆಯಲ್ಲಿ ಸೇತುವೆಯನ್ನೇ ಅವಲಂಭಿಸಿದ್ದ ಜನರು ಇದೀಗ ತೀವ್ರ ತೊಂದರೆ ಅನುಭವಿಸುವಂತಾಗಿದೆ.

Advertisement

ಸಂತ್ರಸ್ಥರಿಗೆ ಶೀಘ್ರ ಅಗತ್ಯ ಮೂಲಸೌಲಭ್ಯ ಒದಗಿಸಲಾಗುವುದು. ಸೂಕ್ತ ಪರಿಹಾರ ನೀಡಲಾಗುವುದು, ಯಾರೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next