Advertisement

ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಿ: ಶೆಟ್ಟರ್‌

04:36 PM Nov 26, 2020 | sudhir |

ಬೆಂಗಳೂರು : ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ದಿ ಪಡಿಸುವುದಕ್ಕೂ ಮುನ್ನ ಆ ಪ್ರದೇಶಗಳಿಗೆ ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಮೊದಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಸೂಚನೆ ನೀಡಿದರು.

Advertisement

ಬೆಂಗಳೂರಿನ ಖನಿಜ ಭವನದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ. ಅಲ್ಲದೆ, ಕೈಗಾರಿಕಾ ಪ್ರದೇಶಕ್ಕೆ ತಲುಪಲು ಹಾಗೂ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯ ಇರುವ ಮೂಲಭೂತ ಸೌಕರ್ಯಗಳು ಇಲ್ಲದ ಪ್ರದೇಶವನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಇದರ ಬದಲಾಗಿ ಮೊದಲು ಪ್ರದೇಶಕ್ಕೆ ತಲುಪಲು ಅಗತ್ಯವಿರುವ ರಸ್ತೆಗಳು ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಮೊದಲು ಅದ್ಯತೆ ನೀಡಬೇಕು. ಆ ಬಳಿಕ ಕೈಗಾರಿಕಾ ಪ್ರದೇಶವನ್ನು ಅಭಿವೃದ್ದಿ ಪಡಿಸುವುದು ಸೂಕ್ತ ಎಂದು ಹೇಳಿದರು.

ಇದನ್ನೂ ಓದಿ:ಸರ್ವಧರ್ಮಗಳ ಏಕತೆಗಾಗಿ ದ್ವಾದಶ ಜ್ಯೋತಿರ್ಲಿಂಗ ದರ್ಶನಕ್ಕೆ ಶಿವಭಕ್ತನ ಪಾದಯಾತ್ರೆ

ಸಭೆಯಲ್ಲಿ ಭಾಗವಹಿಸಿದ್ದ ವಸತಿ ಸಚಿವರಾದ ವಿ ಸೋಮಣ್ಣ ಅವರು ಮಾತನಾಡಿ, ಕೈಗಾರಿಕಾ ಪ್ರದೇಶದ ರಸ್ತೆಗಳ ಕಾಮಗಾರಿಯ ಪ್ರಾರಂಭದ ಸಂಧರ್ಭದಲ್ಲಿ ಅಗತ್ಯ ಹಣಕಾಸಿನ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದರು. ಅಲ್ಲದೆ, ತಾಳಗುಪ್ಪೆ ಗ್ರಾಮದಲ್ಲಿ ಕೆಐಎಡಿಬಿ ವತಿಯಿಂದ ಭೂಸ್ವಾಧೀನ ಕುರಿತ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕೆಐಎಡಿಬಿ ಸಿಇಓ ಡಾ ಶಿವಶಂಕರ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next