Advertisement

Karnataka Politics: ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್

01:26 PM Jan 25, 2024 | Team Udayavani |

ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

Advertisement

ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಅದರಂತೆ ಗುರುವಾರ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ: Cancer ಗುಣವಾಗುತ್ತೆ ಎಂದು ಬಾಲಕನನ್ನು ಗಂಗಾ ನದಿಯಲ್ಲಿ ಮುಳುಗಿಸಿದ ಮಹಿಳೆ… ಆಗಿದ್ದೇ ಬೇರೆ

Advertisement

ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು:
ಪಕ್ಷ ಸೇರ್ಪಡೆಗೊಂಡು ಮಾತನಾಡಿದ ಜಗದೀಶ್ ಶೆಟ್ಟರ್ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆನ್ನುವುದು ನನ್ನ ಅಸೆ ಕಳೆದ ಹತ್ತು ವರ್ಷಗಳಿಂದ ದೇಶದ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ, ಅವರ ಅಭಿವೃದ್ಧಿ ಕೆಲಸದ ಮೂಲಕ ಭಾರತ ಮುನ್ನಡೆಯಬೇಕು ಎಂಬುದು ನನ್ನ ಅಸೆ ಹಾಗಾಗಿ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಇ- ಮೇಲ್ ಮೂಲಕ ರಾಜೀನಾಮೆ ಪತ್ರ
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೆ ಇ- ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿರುವುದಾಗಿ ಶೆಟ್ಟರ್ ಹೇಳಿದ್ದಾರೆ.

2023ರ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ್ದಾಗ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next