Advertisement
ಇಂದು ಬೆಂಗಳೂರಿನಲ್ಲಿ ಎಫ್ ಐ ಸಿ ಸಿ ಐ ವತಿಯಿಂದ ಆಯೋಜಿಸಿದ್ದ ವೇಬಿನಾರ್ ನಲ್ಲಿ ಭಾಗವಹಿಸಿ ಕೈಗಾರಿಕೋದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಪರಿಸ್ಥಿತಿ ಬಹಳ ಬಿಗಡಾಯಿಸಿತ್ತು. ಈ ಹಿನ್ನಲೆಯಲ್ಲಿ ಲಾಕ್‌ಡೌನ್ ನಂತಹ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಲಾಕ್‌ಡೌನ್‌ನಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲದೆ, ದೇಶಾದ್ಯಂತ ಲಸಿಕಾ ಕಾರ್ಯ ವೇಗ ಪಡೆದುಕೊಳ್ಳುತ್ತಿದ್ದು, ಕೈಗಾರಿಕಾ ಸಂಸ್ಥೆಗಳು ತಮ್ಮ ಕಾರ್ಮಿಕರು ಮತ್ತು ಅವಲಂಬಿತರಿಗೆ ಲಸಿಕೆ ದೊರಕಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದು ಶ್ಲಾಘನೀಯ ಕಾರ್ಯವಾಗಿದ್ದು, ಲಸಿಕೆಯನ್ನು ಪಡೆದುಕೊಂಡಿರುವ ಕಾರ್ಮಿಕರೊಂದಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಳೆ ಚರ್ಚೆ ನಡೆಸುವುದಾಗಿ ತಿಳಿಸಿದರು.
Related Articles
Advertisement
ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ರಾಜಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಎಫ್ ಐ ಸಿ ಸಿ ಐ ಅಧ್ಯಕ್ಷ ರಾದ ಕೆ ಉಲ್ಲಾಸ್ ಕಾಮತ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ನೂರಾರು ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.