Advertisement

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

09:32 PM May 18, 2021 | Team Udayavani |

ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕ ಪರಿಷ್ಕರಣೆ ಕುರಿತು ನಾಲ್ಕೈದು ದಿನಗಳಲ್ಲಿ ತೀರ್ಮಾನ ಪ್ರಕಟಿಸುವಂತೆ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಸೂಚನೆ ನೀಡಿದ್ದಾರೆ.

Advertisement

ಮಂಗಳವಾರ ವಿಧಾನಸೌಧದಲ್ಲಿ ಈ ಕುರಿತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಜತೆ ಸಭೆ ನಡೆಸಿದ ಅವರು, ಕೈಗಾರಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದರ ಪರಿಷ್ಕರಿಸುವಂತೆ ನಿರ್ದೇಶನ ನೀಡಿದರು.

ಕೈಗಾರಿಕೆ ಇಲಾಖೆಯ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣಮಂಡಳಿ ಅಧಿಕಾರಿಗಳು, ಕೈಗಾರಿಕಾ ಸಂಘಟನೆಗಳ ಪದಾಧಿಕಾರಿಗಳ ಜತೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಿ ಎಂದು ಹೇಳಿದರು.

ಇದನ್ನೂ ಓದಿ :ಕೋವಿಡ್ ಕಷ್ಟ ಕಾಲದಲ್ಲಿ ಬಂಗಾರವೇ ಜೀವನಾಧಾರ! ಚಿನ್ನ ಅಡ ಇಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ

ಸಮ್ಮತಿ ಶುಲ್ಕ ಪರಿಷ್ಕರಣೆ ಮಾಡುವಂತೆ ಕೈಗಾರಿಕ ಸಂಘಟನೆಗಳ ಪ್ರತಿನಿಧಿಗಳು ಮನವಿ ಮಾಡಿಕೊಂಡಿದ್ದರಿಂದ ಮಂಗಳವಾರ ಎರಡನೇ ಸಭೆ ನಡೆಸಿ ಚರ್ಚಿಸಲಾಯಿತು.

Advertisement

ಸಭೆಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಾದ ರಾಜಕುಮಾರ್‌ ಕತ್ರಿ, ಸಂದೀಪ್‌ ದವೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರಾದ ಗುಂಜನ್‌ ಕೃಷ್ಣ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಶಿವಶಂಕರ್‌, ಉದ್ಯೋಗ ಮಿತ್ರ ನಿರ್ದೇಶಕ ರೇವಣ್ಣಗೌಡ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರಿನಿವಾಸುಲು ಸೇರಿ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next