Advertisement

Hubballi: ಕೇಂದ್ರದಿಂದ ಸಿಲಿಂಡರ್ ಬೆಲೆ ಇಳಿಕೆ: ಇದೊಂದು ಚುನಾವಣಾ ಗಿಮಿಕ್: ಶೆಟ್ಟರ್

02:45 PM Aug 30, 2023 | Team Udayavani |

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಅಡುಗೆ ಅನಿಲ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ತು ಸದಸ್ಯ ಜಗದೀಶ ಶೆಟ್ಟರ ಆರೋಪಿಸಿದರು.

Advertisement

ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಬುಧವಾರ ಸಾಂಕೇತಿಕವಾಗಿ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ದೊಳಗೆ ಲೋಕಸಭಾ ಚುನಾವಣೆ ಮಾಡುವ ಸಂಭವವಿದ್ದು, ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು, ಸಾಧ್ಯವಾದರೇ ಉಚಿತ ಯೋಜನೆಗಳನ್ನು ಘೋಷಿಸಬಹುದು ಎಂದರು.

ಕೇಂದ್ರ ಸರ್ಕಾರ ಈಗಾಗಲೇ ಸಿಲಿಂಡರ್ ದರವನ್ನು ಸಾವಿರ ರೂ. ಹೆಚ್ಚಿಸಿ, ಇದೀಗ ಕೇವಲ 200 ರೂ. ಇಳಿಸಿದರೇ ಏನು ಉಪಯೋಗ. ಅವರಿಗೆ ಜನರ ಬಗ್ಗೆ ನಿಜವಾಗಲೂ ಕಾಳಜಿಯಿದ್ದರೆ ಕನಿಷ್ಠ 500 ರೂ. ಇಳಿಸಬೇಕಿತ್ತು ಎಂದರು.

ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನದಿಂದ ಹತಾಷೆಗೊಂಡಿರುವ ಬಿಜೆಪಿ, ಇನ್ನಿಲ್ಲದ ಆರೋಪಗಳನ್ನು ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧೋಗತಿಗೆ ಹೋಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರವೂ ಸೇರಿದಂತೆ ರಾಜ್ಯದಲ್ಲಿ 15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಗೆಲ್ಲಲಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅದರಂತೆ ಈಗಾಗಲೇ ಮೂರು ಯೋಜನೆ ಜಾರಿಯಾಗಿದ್ದು, ಇಂದು ನಾಲ್ಕನೇ ಯೋಜನೆ ಗೃಹಲಕ್ಷ್ಮಿಗೆ ಚಾಲನೆ ನೀಡಿದೆ. ಈ ಗ್ಯಾರಂಟಿ ಯೋಜನೆಗಳಿಂದ ಬಡವರು, ದೀನ ದಲಿತರು, ಮಧ್ಯಮ ವರ್ಗ ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಈ ಮೂಲಕ ಹೊಸ ಮನ್ವಂತರಿಗೆ ನಾಂದಿ ಹಾಡಿದಂತಾಗಿದೆ ಎಂದರು.

Advertisement

ಇದನ್ನೂ ಓದಿ: Mangalore: ಸೆ. 8 ರಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್‌, ಉಪ ಮೇಯರ್‌ ಚುನಾವಣೆ

Advertisement

Udayavani is now on Telegram. Click here to join our channel and stay updated with the latest news.

Next