ಹುಬ್ಬಳ್ಳಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಕ್ಷೇತ್ರದ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಮಂಗಳವಾರ ದೆಹಲಿಯಿಂದ ಆಗಮಿಸಿದ ನಂತರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರು ಹಾಗೂ ಬೆಳಗಾವಿಯ ಸ್ಥಳೀಯ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದೇನೆ. ಜೊತೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಅಭ್ಯರ್ಥಿಗಳೊಂದಿಗೆ ಮಾತನಾಡಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾರ್ಯ ಆಗಿದೆ ಎಂದರು.
ಪ್ರಧಾನಿ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ವೇಳೆ ಅಭ್ಯರ್ಥಿಗಳ ಲಿಸ್ಟ್ ಫೈನಲ್ ಆಗುತ್ತದೆ. ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿದಾಗ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನುವ ವಿಶ್ವಾಸವಿದೆ. ನಾಳೆ ಅಥವಾ ನಾಡಿದ್ದು ಟಿಕೆಟ್ ಫೈನಲ್ ಆಗುತ್ತದೆ ಎಂದರು.
ಇವತ್ತು ಮಧ್ಯಾಹ್ನ ಪ್ರಭಾಕರ ಕೋರೆ, ಕವಟಗಿಮಠ ಮೊದಲಾದವರ ಜೊತೆ ಚರ್ಚಿಸಿದ್ದೇನೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡೋಣ ಎಂದು ತೀರ್ಮಾನಿಸಿದ್ದೇವೆ. ನನಗೆ ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಿದವರ ಬಗ್ಗೆ ಮಾತಾಡಲ್ಲ. ನಾನು ಅಥವಾ ಈಶ್ವರಪ್ಪ ಪುತ್ರ ಅಭ್ಯರ್ಥಿಯಾಗುತ್ತೇವೆ ಎನ್ನುವ ಮಾಹಿತಿ ಇಲ್ಲ ಎಂದರು.
ಇದನ್ನೂ ಓದಿ: Belagavi ಸುವರ್ಣ ವಿಧಾನಸೌಧಕ್ಕೆ ಸಭಾಪತಿ, ಸ್ಪೀಕರ್ ಭೇಟಿ, ಪರಿಶೀಲನೆ