Advertisement

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

04:44 PM Jun 13, 2024 | Team Udayavani |

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಆಟ ನಡೆಯಲಿಲ್ಲ ಎಂಬುದು ಕಾಂಗ್ರೆಸ್ ಶಾಸಕರಿಗೆ ಮನದಟ್ಟಾಗಿದೆ. ಈ ಹಿನ್ನಲೆಯಲ್ಲಿ ಯೋಜನೆಗಳನ್ನು ಕೈಬಿಡುವಂತೆ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಹೇಳಿದ್ದಾರೆ.

Advertisement

ಈ ಕುರಿತು ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೇ ಹೇಳಲಿ, ಅವರ ಶಾಸಕರಿಗೇ ಇದರ ಬಗ್ಗೆ ಸಮಾಧಾನ ಇಲ್ಲ.

ಐದು ಗ್ಯಾರಂಟಿ ಯೋಜನೆಗಳು ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ. ಯಾವ ಕಾಮಗಾರಿಗೂ ಅನುದಾನ ಬಿಡುಗಡೆಯಾಗುತ್ತಿಲ್ಲ.

ಇನ್ನೊಂದು ಕಡೆ ಈ ಗ್ಯಾರಂಟಿ ಯೋಜನೆಗಳನ್ನು ನಂಬಿಕೊಂಡು ಲೋಕಸಭಾ ಚುನಾವಣೆಗೆ ಹೋಗಿದ್ದ ಕಾಂಗ್ರೆಸ್ ಗೆ ಮತದಾರರು ಸರಿಯಾದ ಪಾಠ ಕಲಿಸಿದ್ದಾರೆ.

ಇದೇ ಕಾರಣದಿಂದ ಈಗ ಕಾಂಗ್ರೆಸ್ ಶಾಸಕರೇ ಪಂಚ ಗ್ಯಾರಂಟಿ ಯೋಜನೆಗಳನ್ನು ಹಿಂದಕ್ಕೆ ಪಡೆಯುವಂತೆ ಸರಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದರು.

Advertisement

ಬೆಳಗಾವಿಯ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ದಲ್ಲಿ ಆರಂಭವಾಗಿರುವ ಒಳಜಗಳದ ಬಗ್ಗೆ ಪ್ರಸ್ತಾಪಿಸಿದ ಅವರು ಇದು ಅವರ ಹಣೆಬರಹ. ನಾವೇಕೆ ಚಿಂತೆ ಮಾಡಬೇಕು ಎಂದು ವ್ಯಂಗವಾಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನನ್ನ ಅಭೂತಪೂರ್ವ ಗೆಲುವಿಗೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರ ಹಾಗೂ ಮುಖಂಡರ ಪ್ರಾಮಾಣಿಕ ಶ್ರಮ ಇದೆ. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಿದ್ದರಿಂದ ನನಗೆ ಒಂದೂವರೆ ಲಕ್ಷಕ್ಕೂ ಅಧಿಕ ಮುನ್ನಡೆ ಸಿಕ್ಕಿತು. ಪಕ್ಷದ ಸಂಘಟಿತ ಶ್ರಮದ ಜೊತೆಗೆ ರಾಜಕಾರಣದ ಒಳಹೊಡೆತ ಸಹ ನನ್ನ ಗೆಲುವಿಗೆ ಸಹಾಯಕಾರಿಯಾಯಿತು ಎಂದು ಹೇಳಿದರು.

ಇದನ್ನೂ ಓದಿ: Anger in country over NEET exam will ‘reverberate inside Parliament’: Cong slams govt

Advertisement

Udayavani is now on Telegram. Click here to join our channel and stay updated with the latest news.

Next