Advertisement

ಕರ್ನಾಟಕದಲ್ಲೇ ಸ್ಪರ್ಧಿಸುತ್ತಾರಾ ಕೇಂದ್ರದ ಇಬ್ಬರು ಸಚಿವರು; ಜಗದೀಶ್ ಶೆಟ್ಟರ್ ಹೇಳಿದ್ದೇನು?

03:58 PM Feb 27, 2024 | Team Udayavani |

ಹುಬ್ಬಳ್ಳಿ; ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಸ್. ಜೈಶಂಕರ್ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿದ್ದು, ಕರ್ನಾಟಕದಿಂದಲ್ಲೇ ಸ್ಪರ್ಧಿಸುತ್ತಾರೆಂಬುದು ಹೇಳೋಕೆ ಆಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು‌.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಬ್ಬರು ಸದ್ಯ ರಾಜ್ಯಸಭೆ ಸದಸ್ಯರು ಅಲ್ಲ. ಹೀಗಾಗಿ ಅವರು ಲೋಕಸಭೆಗೆ ಸ್ಪರ್ಧೆ ಮಾಡಬಹುದು. ಈ ನಿಟ್ಟಿನಲ್ಲಿ ಅವರು ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯದಿಂದಲೂ ಕೂಡ ಸ್ಪರ್ಧೆ ಮಾಡುತ್ತಾರೆ ಅಂತಾ ಹೇಳೋಕೆ ಆಗುವುದಿಲ್ಲ. ಅವರು ಬೇರೆ ರಾಜ್ಯದಿಂದಲೂ ಸ್ಪರ್ಧಿಸಬಹುದು ಎಂದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ವಿಚಾರಕ್ಕೆ ‌ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಚುನಾವಣಾ ಫಲಿತಾಂಶದ ನಂತರ ಯಾರು ಅಡ್ಡ ಮತದಾನ ಮಾಡಿದ್ದಾರೆಂಬುದು ತಿಳಿಯುತ್ತದೆ. ಆದ್ದರಿಂದ ಫಲಿತಾಂಶ ಬರುವವರೆಗೂ ಏನೂ ಹೇಳೋಕೆ ಆಗಲ್ಲ. ಕುದುರೆ ವ್ಯಾಪಾರವೋ ಏನೋ ನನಗೆ ಗೊತ್ತಿಲ್ಲ ಎಂದರು.

ಸಮುದ್ರ ಆಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವಿಲುಗರಿ ನೆಟ್ಟರೆ ಚಿಗಿರುತ್ತಾ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸ ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದರು.

ಕಳಸಾ-ಬಂಡೂರಿ ಯೋಜನೆ ವಿಳಂಬಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸುತ್ತ, ಮನೋಹರ ಪರಿಕರ ಸಿಎಂ ಇದ್ದಾಗ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸುತ್ತಿದೆ. ಅವರ ಮನವೊಲಿಕೆ ಸಹ ಆಗಿತ್ತು. ಆದರೆ ಆ ವೇಳೆ ಗೋವಾ ಕಾಂಗ್ರೆಸ್ ನವರೇ ವಿರೋಧ ಮಾಡಿದ್ದರು ಎಂದರು.

Advertisement

ಗೋವಾ ವಿದ್ಯುತ್ ಯೋಜನೆಗೆ ಅರಣ್ಯ ನಾಶ ವಿಚಾರವಾಗಿ ಉತ್ತರಿಸಿದ ಅವರು, ಇದೇ ವಿಚಾರವಾಗಿ ನಾವು ಹೋರಾಡಬೇಕಾಗುತ್ತದೆ. ವಿದ್ಯುತ್ ಯೋಜನೆಗೆ ಅನುಮತಿ ಕೊಡುವುದಾದರೆ, ಕುಡಿಯುವ ನೀರಿನ ಮಹಾದಾಯಿ ಯೋಜನೆಗೆ ಅನುಮತಿ ನೀಡುವಂತೆ ಬೇಡಿಕೆ ಇಡುತ್ತೇವೆ ಎಂದರು.

ಪಕ್ಷ ಬಿಟ್ಟಿದ್ದ ಕೆಲ ಮುಖಂಡರನ್ನು ಬಿಜೆಪಿಗೆ ಮರು ಸೇರ್ಪಡೆ ಕುರಿತು ಚರ್ಚೆ ಆಗಿದೆ. ಬುಧವಾರ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ 90ಕ್ಕೂ ಹೆಚ್ಚು ಕಾರ್ಯಕರ್ತರು ಸೇರ್ಪಡೆಯಾಗಲಿದ್ದು, ಎಲ್ಲಾ ವಿವಾದಕ್ಕೂ ತೆರೆ ಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇವರೇ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಗಗನಯಾತ್ರಿಗಳು… ಹೆಸರು ಬಹಿರಂಗಪಡಿಸಿದ ಪ್ರಧಾನಿ

Advertisement

Udayavani is now on Telegram. Click here to join our channel and stay updated with the latest news.

Next