Advertisement

ಒತ್ತಡ ಹೇರಲ್ಲ… ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ: ಶೆಟ್ಟರ್

05:06 PM Jun 05, 2024 | Team Udayavani |

ಹುಬ್ಬಳ್ಳಿ: ಯಾವುದೇ ಸ್ಥಾನಮಾನ ನೀಡುವಂತೆ ಒತ್ತಡ ಹೇರಿಲ್ಲ. ಹೇರುವುದಿಲ್ಲ. ಆದರೆ ನೀಡಿದ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ನೂತನವಾಗಿ ಬೆಳಗಾವಿ ಸಂಸದರಾಗಿ ಆಯ್ಕೆಯಾದ ಜಗದೀಶ ಶೆಟ್ಟರ ತಿಳಿಸಿದರು.

Advertisement

ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ನಂತರ ಬುಧವಾರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ನಂತರ ಇಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಆಗಮಿಸಿ ಉಭಯ ಶ್ರೀಗಳ ಗದ್ದುಗೆ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನಾಯಕತ್ವದಲ್ಲಿ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ. ಬೆಳಗಾವಿಯನ್ನು ಮಾದರಿ‌ ಲೋಕಸಭಾ ಕ್ಷೇತ್ರವನ್ನಾಗಿ ಮಾಡಿ, ಸ್ವಚ್ಛ ಸುಂದರ ನಗರವನ್ನಾಗಿಸುವುದಲ್ಲದೆ, ಗ್ರಾಮೀಣ ಭಾಗದಲ್ಲಿ ಹಲವು ಉದ್ಯಮ ತೆರೆದು ನಿರುದ್ಯೋಗಿಗಳ ಕೈಗೆ ಉದ್ಯೋಗ ಒದಗಿಸುವುದು ಸೇರಿದಂತೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ತಿಳಿಸಿದರು.

ಜಗದೀಶ ಶೆಟ್ಟರ ಪತ್ನಿ ಶಿಲ್ಪಾ ಶೆಟ್ಟರ, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ತು ಸದಸ್ಯ ಪ್ರದೀಪ ಶೆಟ್ಟರ, ತಿಪ್ಪಣ್ಣ ಮಜ್ಜಗಿ, ವೀರಣ್ಣ ಸವಡಿ, ಸಂತೋಷ ಚೌಹಾಣ, ರೂಪಾ ಶೆಟ್ಟಿ ಸೇರಿದಂತೆ ಇನ್ನಿತರರಿದ್ದರು.

ಇದನ್ನೂ ಓದಿ: ಬಣ್ಣದ ಲೋಕ ಟು ಪಾಲಿಟಿಕ್ಸ್:‌ ಈ ಬಾರಿ ಚುನಾವಣೆಗೆ ನಿಂತು ಸೋತ ಪ್ರಮುಖ ಸಲೆಬ್ರಿಟಿಗಳಿವರು

Advertisement
Advertisement

Udayavani is now on Telegram. Click here to join our channel and stay updated with the latest news.

Next