Advertisement

ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿಗೆ ಜಗದೀಶ್‌ ಶೆಟ್ಟರ್‌ ಅಭಿನಂದನೆ

12:11 PM Jul 28, 2021 | Team Udayavani |

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್‌ ಬೊಮ್ಮಾಯಿ ಅವರಿಗೆ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್‌ ಶೆಟ್ಟರ್‌ ಅಭಿನಂದಿಸಿದ್ದಾರೆ.

Advertisement

ಬಸವರಾಜ್‌ ಬೊಮ್ಮಾಯಿ ಅವರು ಅನುಭವಿ ಜನಪ್ರತಿನಿಧಿಯಾಗಿದ್ದು, ರಾಜ್ಯವನ್ನು ಅಭಿವೃದ್ದಿಯೆಡೆಗೆ ಕೊಂಡೊಯ್ಯುವಂತಹ ದೃಷ್ಟಿಕೋನವನ್ನು ಹೊಂದಿದ್ದಾರೆ. ವಿವಿಧ ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ಅನುಭವ ಹೊಂದಿರುವ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿರುವುದು ಸಂತಸದ ಸಂಗತಿಯಾಗಿದೆ.

ರಾಜ್ಯವನ್ನು ಒಂದು ಮಾದರಿ ರಾಜ್ಯವನ್ನಾಗಿ ರೂಪಿಸುವಲ್ಲಿ ಸ್ಪಷ್ಟ ಗುರಿಯನ್ನು ಹೊಂದಿರುವ ಅವರು ಆ ನಿಟ್ಟಿನಲ್ಲಿ ಸಫಲರಾಗುತ್ತಾರೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಬೆಂಬಲ ಮತ್ತು ಹಾರೈಕೆ ಇರಲಿದೆ ಎಂದು ಜಗದೀಶ್‌ ಶೆಟ್ಟರ್‌ ತಮ್ಮ ಅಭಿನಂದನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next