Advertisement
ಉಡುಪಿಯ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ನವೀಕೃತ ಮಂದಿರ ಲೋಕಾರ್ಪಣೆ, ಗರ್ಭಗೃಹ ಸಮರ್ಪಣೆ, ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹ ಪ್ರತಿಷ್ಠೆ ಪ್ರಯುಕ್ತ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಪುಷ್ಪಾ ಆವರ್ಶೇಕರ್, ಮುಂಬಯಿ ಉದ್ಯಮಿ ಸುರೇಂದ್ರ ಕಲ್ಯಾಣಪುರ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಅಧ್ಯಕ್ಷ ಕೊಡವೂರು ದಿವಾಕರ ಶೆಟ್ಟಿ, ಜಯಕೃಷ್ಣ ಶೆಟ್ಟಿ ತೋನ್ಸೆ, ಹರ್ಷ ಗ್ರೂಪ್‌ನ ಸೂರ್ಯಪ್ರಕಾಶ್, ಆರ್ಕಿಟೆಕ್ಟ್ ಶ್ರೀನಾಗೇಶ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ, ನವೀನ್ ಶೆಟ್ಟಿ ತೋನ್ಸೆ, ಲೆಕ್ಕಪರಿಶೋಧಕ ಸಿ.ಕೆ. ಪಾಟೀಲ್ ಮಂಬಯಿ, ಗಣೇಶಪುರಿ ಭೀಮೇಶ್ವರ ಸದ್ಗುರು ನಿತ್ಯಾನಂದ ಸಂಸ್ಥಾನದ ಟ್ರಸ್ಟಿ ನ್ಯಾಯವಾದಿ ಸಂಧ್ಯಾ ಜಾಧವ್, ಮುಂಬಯಿಯ ನ್ಯಾಯಾಧಿಧೀಶೆ ಯಶಸ್ವಿ ಮರಳ್ಳೋಕರ್, ಪ್ರಫುಲ್ಲಾ ಜಯ ಶೆಟ್ಟಿ, ಡಾ| ಅಶೋಕ್ ಶೆಟ್ಟಿ ಸೂರತ್, ಬಾಲಕೃಷ್ಣ ಶೆಟ್ಟಿ, ಜಗನ್ನಾಥ್ ಹೆಗ್ಡೆ, ನಿರಂಜನ್ ಮುಂಬಯಿ, ನವೀನ್ ಶೆಟ್ಟಿ ತೋನ್ಸೆ, ಕಾಂಞಂಗಾಡ್ ಟ್ರಸ್ಟ್‌ನ ಎಂ. ನರಸಿಂಹ ಶೆಣೈ, ಕೆ. ಮೋಹನ್‌ಚಂದ್ರನ್ ನಂಬಿಯಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕಾಂಞಂಗಾಡ್ ಟ್ರಸ್ಟ್‌ನ ಟ್ರಸ್ಟಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಲಾ ಜಗತ್ತು ವಿಜಯ ಕುಮಾರ್ ಶೆಟ್ಟಿ ನಿರ್ವಹಿಸಿದರು.
ಕೆ.ಕೆ. ಆವರ್ಶೇಕರ್‌ಗೆ ಸಮ್ಮಾನಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಶಾಸಕ ಕೆ. ರಘುಪತಿ ಭಟ್ ಅವರು ಶ್ರೀ ನಿತ್ಯಾನಂದ ಮಂದಿರ ಮಠದ ನವೀಕೃತ ಮಂದಿರ ನಿರ್ಮಾಣಕ್ಕೆ ಬಹು ದೊಡ್ಡ ಆರ್ಥಿಕ ಕೊಡುಗೆ ನೀಡಿದ ಮಹಾದಾನಿ ಮುಂಬಯಿಯ ಉದ್ಯಮಿ ಕೆ.ಕೆ. ಆವರ್ಶೇಕರ್ ಅವರನ್ನು ಸಮ್ಮಾನಿಸಿ ಗೌರವಿಸಿದರು. ಸೋಮವಾರ ಬೆಳಗ್ಗೆ ಪುಣ್ಯಾಹ, ಪ್ರತಿಷ್ಠಾಕಲಶ, ಅಧಿವಾಸ ಹೋಮ, ಮಹಾಗಣಪತಿ ಯಾಗ, ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿಗಳ ಬಿಂಬ ಪುನಃಪ್ರತಿಷ್ಠೆ, ಜೀವ ಕಲಶಾಭಿಷೇಕ, ಪ್ರಸನ್ನ ಪೂಜೆ, ನಿತ್ಯಾನಂದ ಸ್ವಾಮಿಗೆ 108 ಕಲಶ ಸಹಿತ ಸಾನ್ನಿಧ್ಯ ಕಲಶೋತ್ಸವ, ಪ್ರಸನ್ನ ಪೂಜೆ, ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ ನಡೆದ ಮಹಾ ಅನ್ನಸಂತರ್ಪಣೆಯಲ್ಲಿ ಸುಮಾರು 10 ಸಾವಿರ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ದೀಪಾರಾಧನೆ, ರಂಗಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.