Advertisement

Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ

06:33 PM Oct 20, 2024 | Team Udayavani |

ಲಕ್ಷ್ಮೇಶ್ವರ: ಹಗರಣಗಳ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಂಡಿದ್ದರೆ ಅವರನ್ನು ಕೆಳಗಿಳಿಸಲು ಅವರ ಪಕ್ಷದವರೇ ಸನ್ನದ್ಧರಾಗಿದ್ದಾರೆ. ಯಾವುದೇ ಸಮಯದಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುತ್ತಾರೆ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಕೊರತೆಯಿಂದ ದೇಶದಲ್ಲಿ ಕಾಂಗ್ರೆಸ್‌ ಪರಿಸ್ಥಿತಿ ಡೋಲಾಯಮಾನವಾಗಿದೆ. ಕರ್ನಾಟಕದಲ್ಲಿ ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣಗಳ ಬಗ್ಗೆ ಲೋಕಾಯುಕ್ತ, ಇಡಿ ತನಿಖೆ ನಡೆಯುತ್ತಿದೆ. ಆದರೆ ಲೋಕಾಯುಕ್ತ ಸರ್ಕಾರದ ಅ ಧೀನದಲ್ಲಿರುವುದರಿಂದ, ಸಿಎಂ ಅ ಧಿಕಾರದಲ್ಲಿ ಇರುವುದರಿಂದ ಸರಿಯಾದ ತನಿಖೆ ಆಗಲ್ಲ. ಅದಕ್ಕಾಗಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಿ ನಿರಪರಾಧಿ ಎಂದು ಸಾಬೀತಾದ ಬಳಿಕ ಮತ್ತೆ ಮುಖ್ಯಮಂತ್ರಿಯಾಗಲಿ ಎಂದರು.

ಹಗರಣಗಳ ಸರಮಾಲೆ ಹೊರಬೀಳುತ್ತಲೇ ಬಿಜೆಪಿಯಿಂದ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಆದರೆ ಕಾಂಗ್ರೆಸ್‌ನವರು ಸಿಎಂಗೆ ಬೆಂಬಲ ಸೂಚಿಸುವುದಾಗಿ ಹೇಳಿಕೆ ನೀಡುತ್ತ ಒಳಗೊಳಗೆ ಸಿಎಂ ಆಗಲು ಕನಸು ಕಾಣುತ್ತಿದ್ದಾರೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಈಗಾಗಲೇ ಅವರು ಸ್ಪಷ್ಟನೆ ನೀಡಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬೀಳಲಿದೆ ಎಂದರು.

ಮಾಜಿ ಶಾಸಕ ರಾಮಣ್ಣ ಲಮಾಣಿ ಮತ್ತೆ ಬಿಜೆಪಿ ಸೇರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಮಣ್ಣ ನನ್ನೊಂದಿಗೆ ಅನೇಕ ವರ್ಷಗಳಿಂದ ಉತ್ತಮ ಬಾಂಧವ್ಯ ಹೊಂದಿದ್ದಾರೆ. ನಾನು ಬಂದಿರುವ ವಿಷಯ ತಿಳಿದು ಸ್ವಾಗತಿಸಿದ್ದಾರೆ. ಪಕ್ಷ ಸೇರ್ಪಡೆ ವಿಚಾರ ಅವರಿಗೆ ಬಿಟ್ಟಿದ್ದು. ಈ ಬಗ್ಗೆ ನಾವು ಅವರನ್ನು ಕರೆದಿಲ್ಲ, ಅವರೂ ಈ ಬಗ್ಗೆ ಚರ್ಚೆಯನ್ನೂ ನಡೆಸಿಲ್ಲ. ಮುಂದಿನ ದಿನಗಳಲ್ಲಿ ನೋಡೋಣ ಎಂದರು.

Advertisement

ಶಾಸಕ ಡಾ| ಚಂದ್ರು ಲಮಾಣಿ, ಮುಖಂಡರಾದ ಎಂ.ಎಸ್‌. ದೊಡ್ಡಗೌಡ್ರ, ಸುನೀಲ ಮಹಾಂತಶೆಟ್ಟರ, ನಿಂಬಣ್ಣ ಮಡಿವಾಳರ, ನವೀನ ಬೆಳ್ಳಟ್ಟಿ, ದುಂಡೇಶ ಕೊಟಗಿ, ಗಂಗಾಧರ ಮೆಣಸಿನಕಾಯಿ, ವಿಜಯ ಕುಂಬಾರ, ಪ್ರವೀಣ ಬೋಮಲೆ ಇತರರಿದ್ದರು.

“ಕೈ’ ಬಿಡಲ್ಲ: ರಾಮಣ್ಣ
ಈ ನಡುವೆ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಜಗದೀಶ ಶೆಟ್ಟರ ಅವರನ್ನು ಸ್ವಾಗತಿಸಿದ ಫೋಟೋ ಮಾತ್ರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next