Advertisement

ಸಚಿವ ಜಗದೀಶ ಶೆಟ್ಟರ್ ಗೆ ಮಾತೃ ವಿಯೋಗ

10:09 AM Jan 11, 2020 | Hari Prasad |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ಶೆಟ್ಟರ್ ಅವರ ತಾಯಿ ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (86) ಅವರು ಶುಕ್ರವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಬಸವಣ್ಣೆಮ್ಮ ಅವರು ಸಚಿವರ ಸಹೋದರ ವಿಧಾನ ಪರಿಷತ್ತಿನ ಸದಸ್ಯರಾದ ಸಿ ಪ್ರದೀಫ್ ಶೆಟ್ಟರ್ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

ಸಹೋದರ ಪ್ರದೀಪ್ ಶೆಟ್ಟರ್ ಅವರ ನಿವಾಸಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಶೆಟ್ಟರ್ ಕುಟುಂಬ ಪ್ರಕಟನೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next