Advertisement

ಆಹಾರ ಸಾಮಗ್ರಿಗಳ ಕಿಟ್‌ ವಿತರಣೆ

05:32 PM Apr 10, 2020 | Team Udayavani |

ಜಗಳೂರು: ಒಂದೇ ದಿನಕ್ಕೆ ಎಲ್ಲರಿಗೂ ಆಹಾರ ಸಾಮಗ್ರಿ ವಿತರಿಸಲಾಗುವುದಿಲ್ಲ. ದಾನಿಗಳಿಂದ ಸಂಗ್ರಹಿಸಿ ಹಂತ ಹಂತವಾಗಿ ಆರ್ಹರಿಗೆ ಆಹಾರ ಸಾಮಗ್ರಿ ವಿತರಿಸಲಾಗುವುದು ಎಂದು ಶಾಸಕ ಎಸ್‌.ವಿ. ರಾಮಚಂದ್ರ ಭರವಸೆ ನೀಡಿದರು.

Advertisement

ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ಕಾರ್ಮಿಕರಿಗೆ ಮತ್ತು ಬಡವರ್ಗದವರಿಗೆ ಆಹಾರ ಸಾಮಗ್ರಿಗಳ ಕಿಟ್‌ ವಿತರಿಸಿ ಅವರು ಮಾತನಾಡಿದರು. ಪ್ರಧಾನ ಮಂತ್ರಿ ಮತ್ತು ರಾಜ್ಯದ ಮುಖ್ಯ ಮತ್ರಿಗಳ ಸೂಚನೆಯಂತೆ ಬಡ ಹಾಗೂ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿ ದಾನಿಗಳಿಂದ ಸಂಗ್ರಹಿಸಿ ವಿತರಿಸಲಾಗುತ್ತಿದೆ. ಈಗಾಗಲೆ ಕರವೇ, ಸರಕಾರಿ ನೌಕರರ ಸಂಘದ ವತಿಯಿಂದ ಕಿಟ್‌ ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವರ್ತಕರು ನೀಡಲಿದ್ದು, ಇನ್ನು ಸಹ ದಾನಿಗಳಿಂದ ಸಂಗ್ರಹಿಸಿ ವಿತರಿಸಲಾಗುವುದು ಎಂದರು.

ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಮಾತನಾಡಿದರು. ಇಒ ಮಲ್ಲಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ನಾಗರಾಜ್‌, ಸಿಪಿಐ ದುರು ಗಪ್ಪ, ಪಿಎಸ್‌ಐ ಉಮೇಶ್‌ ಬಾಬು, ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಜ್ಜಣ್ಣ, ಕರವೇ ಅಧ್ಯಕ್ಷ ಮಹಾಂತೇಶ್‌, ಮಹಿಳಾ ಘಟಕದ ಅಧ್ಯಕ್ಷೆ ರೇಖಾ, ಬಿಜೆಪಿ ತಾಲೂಕು ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್‌, ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಷಂಷೀರ್‌, ತಾ.ಪಂ ಸದಸ್ಯ ಸಿದ್ದೇಶ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next