Advertisement

ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ

11:27 AM Jan 20, 2020 | Naveen |

ಜಗಳೂರು: ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ, ನೆರೆಹೊರೆಯವರಿಗೂ ಲಸಿಕೆ ಹಾಕಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಪೋಷಕರಿಗೆ ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಸಲಹೆ ನೀಡಿದರು.

Advertisement

ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದ ಹೊಸ ಬಸ್‌ ನಿಲ್ದಾಣದಲ್ಲಿ ತೆರೆಯಲಾಗಿದ್ದ ಲಸಿಕಾ ಕೇಂದ್ರದಲ್ಲಿ ಮಕ್ಕಳಿಗೆ ಲಸಿಕೆ ಹಾಕಿ ಮಾತನಾಡಿದ ಅವರು, ನಮ್ಮಲ್ಲಿ ಪೋಲಿಯೋ ಪ್ರಕರಣಗಳು ಇಲ್ಲದಿದ್ದರೂ ಸಹ ಕೋಟಿಗಟ್ಟಲೆ ಹಣ ವೆಚ್ಚ ಮಾಡಿ ಪ್ರತಿಯೊಬ್ಬರು ಆರೋಗ್ಯವಾಗಿರಬೇಕೆಂಬ ಉದ್ದೇಶದಿಂದ ಸರಕಾರ ಹಲವಾರು ಲಸಿಕಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಮಕ್ಕಳು ಬೆಳೆಯುವ ಹಂತದಲ್ಲಿ ವಯಸ್ಸಿಗನುಗಣವಾಗಿ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದು, ಜನತೆ ಸದುಪಯೋಗ ಪಡೆಯಬೇಕು ಎಂದರು.

ಟಿಎಚ್‌ಒ ಜಿ.ಓ. ನಾಗರಾಜ್‌ ಮಾತನಾಡಿ, ಇಂದಿನಿಂದ 4 ದಿನಗಳ ಕಾಲ ಅಭಿಯಾನ ನಡೆಯಲಿದ್ದು, ತಾಲೂಕಿನಲ್ಲಿ 5 ವರ್ಷದೊಳಗಿನ 20,500 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪಟ್ಟಣ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ಒಟ್ಟು 138 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 298 ಅಂಗನವಾಡಿ, ಆಶಾ, ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಆರೋಗ್ಯ ನಿರೀಕ್ಷಕ ಕಿಫಾಯತ್‌, ಆರ್‌ .ಐ . ಕುಬೇಂದ್ರ ನಾಯ್ಕ, ಸಂತೋಷ್‌, ಪ್ರಕಾಶ್‌, ಜಗದೀಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next