ಜಗಳೂರು: ಶೌಚಾಲಯದ ಕಾಮಗಾರಿ ಪೂರ್ಣಗೊಂಡಿದೆ. ಆದರೂ ಉದ್ಘಾಟನೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಹೌದು, ಪಟ್ಟಣದ ಕ್ರೀಡಾಂಗಣದ ಸಮೀಪ ಇರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಟ್ಟಣ ಪಂಚಾಯಿತಿಯಿಂದ 3 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಿಸಿ ವರ್ಷಗಳೇ ಕಳೆದರೂ ಸಹ ಇಲಾಖೆಯವರು ಶೌಚಾಲಯವನ್ನು ಕಾಲೇಜಿನ ಸುಪರ್ದಿಗೆ ನೀಡದೇ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.
ಕಾಲೇಜಿನಲ್ಲಿ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಪುರುಷ ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗೆ ಬಯಲು ಆಶ್ರಯಿಸಿದರೆ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರು ಉಪಯೋಗಿಸುವ ಶೌಚಾಲಯ ಬಳಸುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಇನ್ನೊಂದು ಶೌಚಾಲಯ ಅವಶ್ಯಕತೆ ಇತ್ತು. ಪಟ್ಟಣ ಪಂಚಾಯಿತಿ ವತಿಯಿಂದ ಸುಮಾರು
4 ವರ್ಷಗಳ ಹಿಂದೆ ಕಾಮಗಾರಿ ಪ್ರಾರಂಭವಾಗಿ ಗುತ್ತಿಗೆದಾರರ
ನಿರ್ಲಕ್ಷéದಿಂದ ವಿಳಂಬವಾಗಿತ್ತು.
ಕಾಮಗಾರಿ ಪೂರ್ಣಗೊಂಡು ಸುಮಾರು ತಿಂಗಳು ಕಳೆದಿದ್ದರು ಇಲಾಖೆಯವರು ಕಾಲೇಜಿನ ಸುಪರ್ದಿಗೆ ನೀಡದೇ ಶೌಚಾಲಯಕ್ಕೆ ಬೀಗ ಜಡಿದಿದ್ದಾರೆ.