Advertisement

ಕೋವಿಡ್ ನಿಯಂತ್ರಣಕ್ಕೆ ಜನರ ಸಹಕಾರ ಮುಖ್ಯ: ದುರ್ಗಪ್ಪ

04:07 PM Jun 19, 2020 | Naveen |

ಜಗಳೂರು: ಕೋವಿಡ್ ವೈರಸ್‌ ನಿಯಂತ್ರಿಸಲು ಅಧಿಕಾರಿಗಳೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ವೃತ್ತ ನಿರೀಕ್ಷಕ ದುರ್ಗಪ್ಪ ಹೇಳಿದರು.

Advertisement

ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ನಡೆದ ಮಾಸ್ಕ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ವೈರಸ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಅನವಶ್ಯಕವಾಗಿ ಪಟ್ಟಣದಲ್ಲಿ ಓಡಾಡುವವರಿಗೆ ಹಾಗೂ ಮಾಸ್ಕ್ ಧರಿಸದೇ ಇರುವವರಿಗೆ ದಂಡವನ್ನೂ ವಿಧಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಮನೆಯಿಂದ ಹೊರಗೆ ಬರುವಾಗ ಮಾಸ್ಕ್ ಧರಿಸಿಯೇ ಬರಬೇಕು ಮನೆಗೆ ಹೋದಾಗ ಸಾಬೂನಿನಿಂದ ಕೈತೊಳೆದುಕೊಳ್ಳಬೇಕೆಂದರು.

ತಹಶೀಲ್ದಾರ್‌ ಗಿರೀಶ್‌ಬಾಬು, ಪಪಂ ಮುಖ್ಯಾಧಿಕಾರಿ ರಾಜು ಡಿ. ಬಣಕರ್‌ ಮಾತನಾಡಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶಮೂರ್ತಿ. ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮಹೇಶ್ವರಪ್ಪ, ತಾಪಂ ಇಒ ಮಲ್ಲಾ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರಾಜ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next