Advertisement

ಪಡಿತರಕ್ಕೆ ಹಣ ವಸೂಲಿ ಮಾಡಿದ್ರೆ ಕ್ರಮ

06:05 PM Apr 23, 2020 | Naveen |

ಜಗಳೂರು: ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಇಂಥ ಪ್ರಕರಣಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ತಿಮ್ಮಯ್ಯ ಎಚ್ಚರಿಸಿದರು.

Advertisement

ಪಟ್ಟಣದ ತರಳುಬಾಳು ಕೇಂದ್ರದಲ್ಲಿ ತಾಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಹಮ್ಮಿಕೊಂಡಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನ್ಯಾಯಯುತವಾಗಿ ಪಡಿತರವನ್ನು ನೀಡಬೇಕು. ಇಂಥ ಪರಿಸ್ಥಿತಿಯಲ್ಲಿ ಹಣ ಪಡೆಯದೆ ನಿಮ್ಮ ಮೇಲೆ ದೂರು ಬಾರದಂತೆ ನೋಡಿಕೊಳ್ಳಿ ಎಂದರು.

ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳೇ ಮದ್ದು. ನಮ್ಮಲ್ಲಿ ವೈರಸ್‌ ಕಾಣಿಸಿಕೊಂಡಿಲ್ಲ ಎಂಬ ನಿರ್ಲಕ್ಷ್ಯ ಬೇಡ. ಅದು ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ. ಸಾಕಷ್ಟು ಜನ ಕೂಲಿ ಮಾಡಿ ಜೀವನ ನಡೆಸುತ್ತಿದ್ದಾರೆ. ಈಗ ಲಾಕ್‌ಡೌನ್‌ ಇರುವುದರಿಂದ ಕೂಲಿ ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ಅನುಕೂಲಸ್ಥರು ಅಂಥವರಿಗೆ ನೆರವು ನೀಡಬೇಕು ಎಂದು ಕರೆ ನೀಡಿದರು.

ಡಾ| ಮೋಹನ್‌, ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷ ಪುಟ್ಟಣ್ಣ, ಶಿರಾಸ್ತೇದಾರ್‌ ರವಿ, ಆಹಾರ ಇಲಾಖೆ ನಿರೀಕ್ಷಕರಾದ ಶಿವಪ್ರಕಾಶ್‌, ಗುರುಪ್ರಸಾದ್‌, ಶಿಕ್ಷಕ ಅಬ್ದುಲ್‌ ರಜಾಕ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next