Advertisement

ಕೋವಿಡ್ ವಾರಿಯರ್ಸ್ ಸೇವೆ ಸ್ಮರಣೀಯ

11:43 AM Jun 20, 2020 | Naveen |

ಜಗಳೂರು: ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಹಾಗೂ ಕೋವಿಡ್ ವಾರಿಯರ್ ಹಗಲಿರುಳು ಶ್ರಮಿಸಿದ್ದರಿಂದ ಜಿಲ್ಲೆಯಲ್ಲಿ ಕೋವಿಡ್ ವೈರಸ್‌ ಹಾವಳಿಯನ್ನು ಯಶಸ್ವಿಯಾಗಿ ನಿಯಂತ್ರಿಸಲು ಸಾಧ್ಯವಾಗಿದೆ ಎಂದು ಶಾಸಕ ಎಸ್‌.ವಿ. ರಾಮಚಂದ್ರ ಹೇಳಿದರು.

Advertisement

ಪಟ್ಟಣದ ತರಳಬಾಳು ಕೇಂದ್ರದಲ್ಲಿ ಎಸ್‌.ವಿ.ಆರ್‌ ಅಭಿಮಾನಿ ಬಳಗ ಹಾಗೂ ಬಿಜೆಪಿ ವತಿಯಿಂದ ಜಿಲ್ಲಾ ಮಟ್ಟದ ಕೋವಿಡ್ ವಾರಿಯರ್ಗೆ ಹಮ್ಮಿಕೊಂಡಿದ್ದ ಅಭಿನಂದನೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆಹಾರ ಕಿಟ್‌ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಇನ್ನೂ ಹೋಗಿಲ್ಲ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಂಡು ವೃದ್ಧರು ಮತ್ತು ಚಿಕ್ಕಮಕ್ಕಳನ್ನು ಜಾಗರೂಕವಾಗಿ ನೋಡಿಕೊಳ್ಳಬೇಕೆಂದರು.

ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರದಿಂದ ಕೊರೊನಾ ವಿರುದ್ಧ ಹೋರಾಡಲು ಸಾಧ್ಯವಾಗಿದೆ. ಜಿಲ್ಲೆಯಲ್ಲಿ 23 ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಆಕಾಶವೇ ತಲೆ ಮೇಲೆ ಬಿದ್ದಂತಾಗಿತ್ತು. ಅ ಸಂದರ್ಭದಲ್ಲಿ ಅಧಿಕಾರಿಗಳು ನನಗೆ ಧೆ„ರ್ಯ ತುಂಬಿದರು. ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಮಾರ್ಗದರ್ಶನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕೂಡ ಉತ್ತಮಜವಾಗಿ ಕೆಲಸ ಮಾಡಿದ್ದಾರೆಂದು ಶ್ಲಾಘಿಸಿದರು.

ಎಸ್‌ಪಿ ಹನುಮಂತರಾಯ ಮಾತನಾಡಿ, ಕೋವಿಡ್ ವಿರುದ್ಧ ಹೋರಾಡಲು ಅಧಿಕಾರಿಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಮುಖ್ಯ. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ಬಳಕೆ ಮಾಡಿ ಸುರಕ್ಷತಾ ಕ್ರಮವನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಇಂದಿರಾ, ದೂಡಾ ಆಯುಕ್ತ ಕುಮಾರಸ್ವಾಮಿ, ಉಪವಿಭಾಗಾಧಿಕಾರಿಗಳಾದ ಮಮತಾ ಹೊಸಗೌಡರ್‌, ಹುಲ್ಲುಮನಿ ತಿಮ್ಮಣ್ಣ, ಪಿ.ಡಿ. ನಜ್ಮಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ರಾಘವೇಂದ್ರ ಸ್ವಾಮಿ, ತಹಶೀಲ್ದಾರ್‌ ಗಿರೀಶ್‌ಬಾಬು, ತಾಪಂ ಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ, ಪಪಂ ಮುಖ್ಯಾಧಿಕಾರಿ ರಾಜು ಬಣಕಾರ್‌, ಬಿಜೆಪಿ ಮಂಡಲ ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್‌, ಎಸ್ಟಿ ಕಚೇರಿಯ ಮಹೇಶ್ವರಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next