Advertisement

ಸ್ವಚ್ಛತೆ ಇದ್ದಲ್ಲಿ ವಾಸಿಸುತ್ತಾನೆ ಭಗವಂತ

05:28 PM Feb 13, 2020 | Naveen |

ಜಗಳೂರು: ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ನೀಡುವ ಹಸಿರು ಮತ್ತು ನೀಲಿ ಬಣ್ಣದ ಕಸದ ಬುಟ್ಟಿಗಳಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಗುಣಕಾರ್‌ ಹೇಳಿದರು.

Advertisement

ಪಟ್ಟಣದ ಅಂಬೇಡ್ಕರ್‌ ವೃತ್ತದ ಗಣೇಶ ದೇವಾಲಯದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಸಿರು-ನೀಲಿ ಕಸದ ಬುಟ್ಟಿ ವಿತರಣೆ ಮಾಡಿ ಅವರು ಮಾತನಾಡಿದರು.

ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಇರುವ ದೇವಾಲಯ ಮತ್ತು ಮಠ, ಮಂದಿರ, ಮಸೀದಿ, ಚರ್ಚ್‌ಗಳು ಸೇರಿದಂತೆ ಒಟ್ಟು 126 ಕೇಂದ್ರಗಳಿಗೆ ಹಸಿರು ಮತ್ತು ನೀಲಿ ಬಣ್ಣದ ಕಸದ ಬುಟ್ಟಿಗಳನ್ನು ವಿತರಣೆ ಮಾಡಲಾಗುತ್ತಿದೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಭಗವಂತ ವಾಸಿಸಲಿದ್ದಾನೆ ಎಂಬಂತೆ ಶ್ರೀ ಕ್ಷೇತ್ರದಲ್ಲಿ ಅನಾದಿ ಕಾಲದಿಂದಲೂ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬರಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಧರ್ಮಸ್ಥಳ ಸ್ವಚ್ಛ ಧಾರ್ಮಿಕ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ಕಾಪಾಡುವ ಸಲುವಾಗಿ ನಮ್ಮೂರು ನಮ್ಮ ಶ್ರದ್ಧಾ ಕೇಂದ್ರ ಎಂಬ ಧ್ಯೇಯ ವಾಕ್ಯದಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ
ಜ.7 ರಿಂದ 13ರವರೆಗೆ ರಾಜ್ಯಾದ್ಯಾಂತ ಸ್ವಚ್ಛತಾ ಸಪ್ತಾಹ ಆಚರಿಸಲಾಗಿದೆ. ಶ್ರೀ ವೀರೇಂದ್ರ ಹೆಗ್ಗಡೆಯವರ ಸಂಕಲ್ಪದಂತೆ ಎಲ್ಲಾ 126 ಧಾರ್ಮಿಕ ಕೇಂದ್ರಗಳಿಗೆ ಹಸಿರು ಮತ್ತು ನೀಲಿ ಬಣ್ಣದ ಕಸದ ಬುಟ್ಟಿ ವಿತರಿಸಲಾಗುತ್ತಿದ್ದು, ಹಸಿ-ಒಣ ಕಸ ಪ್ರತ್ಯೇಕವಾಗಿ ವಿಂಗಡಿಸಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛತೆಯನ್ನು ಕಾಪಾಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ಪ್ರೇರಣಾ ಸಮಾಜ ಸೇವಾ ಸಂಸ್ಥೆಯ ಫಾ|ವಿಲಿಯಮ್‌ ಮಿರಾಂದ, ಅಲ್‌ ಫಾತಿಮಾ ಸಂಸ್ಥೆಯ ಕಾರ್ಯದರ್ಶಿ ಷಾಯಿನಾ ಬೇಗಂ, ಅರವಿಂದ್‌, ಮಂಜುಳ, ಮಂಜುನಾಥಾಚಾರಿ, ತಿಪ್ಪೇಸ್ವಾಮಿ, ಪಪಂ ಸದಸ್ಯ ಪಾಪಲಿಂಗಪ್ಪ, ಆರೋಗ್ಯ ನಿರೀಕ್ಷಕ ಕಿಫಾಯತ್‌ ಸೇರಿದಂತೆ ಮೇಲ್ವಿಚಾರಕರು, ಧಾರ್ಮಿಕ ಕೇಂದ್ರಗಳ ಅರ್ಚಕರು, ಮುಖಂಡರು, ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next