Advertisement

ಸಮರೋಪಾದಿಯಲ್ಲಿ ಕೆಲಸ ಮಾಡಲು ಸೂಚನೆ

03:16 PM May 09, 2020 | Naveen |

ಜಗಳೂರು: ಕೋವಿಡ್ ನಿಯಂತ್ರಿಸಲು ಪ್ರತಿಯೊಬ್ಬ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮರೋಪಾರಿಯಲ್ಲಿ ಕೆಲಸ ಮಾಡಬೇಕು ಎಂದು ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಸೂಚಿಸಿದರು.

Advertisement

ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಪಿಡಿಒ ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿ ಅಂಗಡಿ ಮುಂಭಾಗದಲ್ಲಿ ಮತ್ತು ತರಕಾರಿ ಮಾರಾಟ ಮಾಡುವ ಸ್ಥಳಗಳಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವಂತೆ ಬಾಕ್ಸ್‌ಗಳನ್ನು ಮಾಡಲಾಗಿದೆ. ಕೋವಿಡ್ ನಮ್ಮಲ್ಲಿ ಬಂದಿಲ್ಲ ಎಂಬ ಬೇಜವಾಬ್ದಾರಿ ಬೇಡ. ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ತಾಲೂಕಿನಲ್ಲಿ ಚೆಕ್‌ಪೋಸ್ಟ್‌ಗಳನ್ನು ಮಾಡಿದ್ದು ಯಾವುದೇ ಭಾಗದಿಂದಲೂ ದಾವಣಗೆರೆಯಿಂದ ಜಗಳೂರಿಗೆ ಯಾರೂ ಬರದಂತೆ ಮತ್ತು ತೆರಳದಂತೆ ನಿಗಾ ವಹಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಒ ಮತ್ತು ಗ್ರಾಮಲೆಕ್ಕಾಧಿಕಾರಿಗಳು ಗ್ರಾಮಗಳ ಸಂಪರ್ಕ ರಸ್ತೆಗಳನ್ನು ಬಂದ್‌ ಮಾಡಿಸಿ ಹೊಸಬರನ್ನು ಗ್ರಾಮಗಳಿಗೆ ಪ್ರವೇಶ ಮಾಡದಂತೆ ನಿರ್ಬಂಧಿಸಬೇಕು ಎಂದರು. ಪಪಂ ಮುಖ್ಯಾಧಿಕಾರಿ ರಾಜು ಡಿ. ಬಣಕಾರ, ತಾಪಂ ಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next