Advertisement
ಪಟ್ಟಣದ ಇಮಾಮ್ ಶಾಲಾ ಆವರಣದಲ್ಲಿ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಾ ಉತ್ಸವವನ್ನು ಉದ್ಘಾಟಿಸಿ, ಅವರು ಮಾತನಾಡಿದರು, ಕಲಿಕೆ ಸಮಯದಲ್ಲಿ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಬೇಕು. ಮಕ್ಕಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಶಿಕ್ಷಕರು ಸಹಕಾರ ನೀಡಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಸಾಧನೆಗೈಯಲು ಸಾಧ್ಯವಾಗಲಿದೆ ಎಂದರು.
Related Articles
Advertisement
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಮರಳುಸಿದ್ದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಇಂತಹ ವೇದಿಕೆಗಳು ಅವಶ್ಯಕ ಎಂದರು. ಕ್ಷೇತ್ರ ಶಿಕ್ಷಣಾಧಿ ಕಾರಿ ಯುವರಾಜ್ ನಾಯ್ಕ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಕಲೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಸರಕಾರ 2002 ರಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಮಕ್ಕಳು ಸಹ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಸಹಕಾರಿಯಾಗಿದೆ. ತಂತ್ರಜ್ಞಾನದ ಭರಾಟೆಯಲ್ಲಿ ಕಣ್ಮರೆಯಾಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವಂತಹ ಕೆಲಸ ಸಹ ಇದರಿಂದ ನಡೆಯುತ್ತಿದೆ ಎಂದು ಹೇಳಿದರು.
ಮುಗ್ಗಿದ ರಾಗಿಹಳ್ಳಿ ಮೋರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳು ಮಾಡಿದ ಸಾಂಪ್ರದಾಯಿಕ ಕಂಸಾಳೆ ನೃತ್ಯ ಮೆಚ್ಚಿ ಶಾಸಕರು ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ 10 ಸಾವಿರ ರೂ. ನಗದು ಬಹುಮಾನ ನೀಡಿದರು. ವಿವಿಧ ಸ್ಪರ್ಧೆಗಳಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಪಂ ಸದಸ್ಯರಾದ ಎಸ್.ಕೆ. ಮಂಜುನಾಥ, ಶಾಂತಕುಮಾರಿ,ಉಮಾ ವೆಂಕಟೇಶ್, ಜಿ.ಪಂ ಮಾಜಿ ಸದಸ್ಯ ಸೊಕ್ಕೆ ನಾಗರಾಜ್, ಪಪಂ ಸದಸ್ಯರಾದ ಲುಕ್ಮಾನ್ ಖಾನ್, ಬಿಜೆಪಿ ಮುಖಂಡರಾದ ಬಿಸ್ತುವಳ್ಳಿ ಬಾಬು, ವಕೀಲ ಹನುಮಂತಪ್ಪ, ಇಮಾಮ್ ಶಾಲಾ ಆಡಳಿತ ಮಂಡಳಿಯ ಹುಸೇನ್ ಮಿಯ್ನಾ, ಇಸಿಓ ಮಂಜುನಾಥ, ಶಿಕ್ಷಕರಾದ ಸತೀಶ್, ನಾಗರಾಜ್, ಇತರರು ಇದ್ದರು.