Advertisement

ಆಡಂಬರ ಬೇಡ-ಸರಳ ವಿವಾಹಕ್ಕೆ ಆದ್ಯತೆ ನೀಡಿ

05:47 PM May 07, 2019 | Team Udayavani |

ಜಗಳೂರು: ಪ್ರತಿಯೊಬ್ಬರು ಸರಳ ವಿವಾಹಕ್ಕೆ ಆದ್ಯತೆ ನೀಡಿದಾಗ ಮಾತ್ರ ದುಂದುವೆಚ್ಚದ ಮದುವೆಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಭಕ್ತರಿಗೆ ಸಲಹೆ ನೀಡಿದರು.

Advertisement

ಸೊಮವಾರ ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ಗೊಲ್ಲ ಸಮಾಜ ಮತ್ತು ಗ್ರಾಮಸ್ಥರು ಹಮ್ಮಿಕೊಂಡಿದ್ದ ಸರಳ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಶ್ರೀಗಳು ಆಶಿರ್ವಚನ ನೀಡಿದರು.

ದೇಶದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಶರವೇಗದಲ್ಲಿ ಬೆಳೆಯುತ್ತಿದೆ. ಅದನ್ನು ನಿಯಂತ್ರಿಸುವ ಕೆಲಸವಾಗಬೇಕಾಗಿದೆ.

ಪ್ರತಿಯೊಬ್ಬರು ಶಿಕ್ಷಣ ವಂತರಾಗಬೇಕು. ಆಗ ಮಾತ್ರ ಸಮಾಜದಲ್ಲಿರುವ ಕೊಳೆಯನ್ನು ತಗೆಯಲು ಸಾಧ್ಯವಾಗಲಿದೆ. ಜೊತೆಗೆ ಸರಳ ವಿವಾಹಕ್ಕೆ ಆದ್ಯತೆ ನೀಡಬೇಕು. ಆಡಂಬರದ ಮದುವೆಯಾಗಬೇಕು ಎಂದು ಎಲ್ಲಿಯೂ ಹೇಳಿಲ್ಲ. ಯಾವ ರೀತಿ ಮದುವೆ ಆಗುತ್ತೇವೆ ಎಂಬುದು ಮುಖ್ಯವಲ್ಲ, ಯಾವ ರೀತಿ ಜೀವನ ಮಾಡುತ್ತೇವೆ ಎಂಬುದು ಬಹಳ ಮುಖ್ಯವಾಗಿದೆ ಎಂದರು.

ವಿವಾಹವಾದಂತಹ ದಂಪತಿಗಳು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ, ಉತ್ತಮ ಭವಿಷ್ಯ ರೂಪಿಸುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಉತ್ತಮ ಪರಿಸರ ನಿರ್ಮಾಣ ಮಾಡಬೇಕು ಎಂದರು.

Advertisement

ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಗ್ರಾಮದ ಸಾಮರಸ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಚುನಾವಣೆಯನ್ನು ಕೇವಲ ನಿಮ್ಮ ಕರ್ತವ್ಯವೆಂದು ಭಾವಿಸಿ ಎಂದರು.

ಈ ವೇಳೆ ಶ್ರೀಗಳು ಸಸಿ ನೆಡುವ ಮೂಲಕ ಗ್ರಾಮ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಿದರು. ಮೂರು ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಈ ಸಂದರ್ಭದಲ್ಲಿ ಶಾಸಕ ಎಸ್‌.ವಿ. ರಾಮಚಂದ್ರ, ಯೋಧ ಚಂದ್ರಪ್ಪ, ಮುಖಂಡರಾದ ರಂಗಪ್ಪ, ಎ.ಹಳ್ಳೆಪ್ಪ, ಜಿ.ಆರ್‌ ಇಂದ್ರೇಶ್‌, ಮಹಾಲಿಂಗಪ್ಪ, ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next