Advertisement

Election: ತೆಲಂಗಾಣ ಚುನಾವಣೆಗೆ ಸ್ಪರ್ಧಿಸಲ್ಲ, ಆದರೆ…: ವೈ.ಎಸ್. ಶರ್ಮಿಳಾ ಹೇಳಿದ್ದೇನು?

01:57 PM Nov 03, 2023 | sudhir |

ಹೈದರಾಬಾದ್: ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವೈಎಸ್‌ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈಎಸ್ ಶರ್ಮಿಳಾ ಇಂದು ಹೇಳಿದ್ದಾರೆ.

Advertisement

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ಸೂಚಿಸುವುದಾಗಿ ಹೇಳಿಕೊಂಡಿದ್ದಾರೆ.

ಸಿಎಂ ಕೆಸಿಆರ್ ಸೋಲಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಅದರ ಭಾಗವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಶರ್ಮಿಳಾ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ವೈಎಸ್ ಶರ್ಮಿಳಾ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜಕೀಯ ವಿಚಾರವಾಗಿ ಮಾತುಕತೆ ನಡೆಸಿ ಕಾಂಗ್ರೆಸ್ ಗೆ ಬೆಂಬಲ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ.

Advertisement

ಇದನ್ನೂ ಓದಿ: Shimoga; ನಮ್ಮಲ್ಲಿ ಹೈಕಮಾಂಡ್ ‌ಇದೆ. ಎಲ್ಲವನ್ನೂ ಅದೇ ನೋಡಿಕೊಳ್ಳುತ್ತದೆ: ಮಧು ಬಂಗಾರಪ್ಪ

Advertisement

Udayavani is now on Telegram. Click here to join our channel and stay updated with the latest news.

Next