Advertisement
ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಸದಸ್ಯರು ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಪ್ರವೇಶಿಸಿ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಭಂಡಾರವನ್ನು ಪುನಃ ತೆರೆಯಲಾಯಿತು ಎಂದು ವರದಿಯಾಗಿದೆ.
Related Articles
Advertisement
ಖಜಾನೆ ತೆರೆದಾಗ ಹಾಜರಿದ್ದ 11 ಜನರಲ್ಲಿ ಒರಿಸ್ಸಾದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಬಿಸ್ವನಾಥ್ ರಾತ್, ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ (ಎಸ್ಜೆಟಿಎ) ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧಿ, ಎಎಸ್ಐ ಸೂಪರಿಂಟೆಂಡೆಂಟ್ ಡಿಬಿ ಗಡನಾಯಕ್ ಮತ್ತು ಪುರಿಯ ಪಟ್ಟದ ರಾಜ ಗಜಪತಿ ಮಹಾರಾಜನ ಪ್ರತಿನಿಧಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಭಂಡಾರ
ಪುರಿ ಜಗನ್ನಾಥ ದೇವಸ್ಥಾನದ ಉತ್ತರ ಭಾಗದ ಜಗನ್ಮೋಹನ ಎಂಬ ಪ್ರದೇಶದಲ್ಲಿ ಈ ರತ್ನ ಭಂಡಾರವಿದ್ದು ದೇವಾಲಯದ ಮಾದರಿಯನ್ನು ಹೊಂದಿದೆ. ಇದು 11.78 ಮೀಟರ್ ಎತ್ತರವಿದ್ದು ಇದರಲ್ಲಿ ಹೊರ ಭಂಡಾರ (ಬಾಹರ್ ಭಂಡಾರ್), ಒಳ ಭಂಡಾರ (ಭೀತರ್ ಭಂಡಾರ್) ಎಂಬ ಗೋಪುರಗಳಿವೆ. ಇದರಲ್ಲಿ 5 ಚೇಂಬರ್‌ಗಳಿದ್ದು ಹೊರ ಭಂಡಾರಕ್ಕಿಂತ ಒಳ ಭಂಡಾರ ವಿಶಾಲವಾಗಿದೆ. ಜಗನ್ನಾಥನ ವಾರ್ಷಿಕ ರಥಯಾತ್ರೆಗೆ ಬಳಸುವ ಆಭರಣಗಳು ಹೊರ ಭಂಡಾರದಲ್ಲಿದ್ದು ಒಳ ರತ್ನ ಭಂಡಾರದ 3 ಚೇಂಬರ್‌ಗಳಲ್ಲಿ 15 ಮರದ ಪೆಟ್ಟಿಗೆಗಳ ತುಂಬ ಬರೀ ಬೆಳ್ಳಿ, ಬಂಗಾರ, ರೂಬಿ, ವಜ್ರ ಇತ್ಯಾದಿಗಳ ಅಪರೂಪದ ವಸ್ತುಗಳೇ ತುಂಬಿವೆ ಎನ್ನಲಾಗಿದೆ.