Advertisement

ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ

09:53 AM Jan 21, 2020 | Hari Prasad |

ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ. ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ ಗುರುತಿಸಲ್ಪಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೇ ನಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಮಾಪ್ತರಾಗಿದ್ದಾರೆ.

Advertisement

ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಕಳೆದ ಲೋಕಸಭಾ ಚುನಾವಣೆಯ ಬಳಿಕ ಪ್ರಧಾನಿ ಮೋದಿ ಅವರ ಸಚಿವ ಸಂಪುಟ ಪ್ರವೇಶಿಸಿದ ಬಳಿಕ ಜೆ.ಪಿ. ನಡ್ಡಾ ಅವರು ಕಾರ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದರು. ಕೇಂದ್ರ ಸಚಿವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಚಿವರು ಪಕ್ಷದ ಕೇಂದ್ರ ಕಛೇರಿಯಲ್ಲಿ ನಡ್ಡಾ ಅವರ ಪರ ನಾಮಪತ್ರ ಸಲ್ಲಿಸಲು ಹಾಜರಿದ್ದರು.

ಕೇಂದ್ರ ಸಚಿವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಚಿವರು ಪಕ್ಷದ ಕೇಂದ್ರ ಕಛೇರಿಯಲ್ಲಿ ನಡ್ಡಾ ಅವರ ಪರ ನಾಮಪತ್ರ ಸಲ್ಲಿಸಲು ಹಾಜರಿದ್ದರು. 36 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ 21 ಕಡೆಗಳಲ್ಲಿ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ  ಸಾಂಸ್ಥಿಕ ಚುನಾವಣಾ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಪಕ್ಷದ ಹಿರಿಯ ನಾಯಕ ರಾಧಾ ಮೋಹನ್ ಸಿಂಗ್ ಅವರು ಚುನಾವಣಾ ಕಾರ್ಯಸೂಚಿಯನ್ನು ಪ್ರಕಟಿಸಿದರು. ಮತ್ತು ಜೆ.ಪಿ. ನಡ್ಡಾ ಅವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next