ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂ. 30ರಂದು ನಡೆಯ ಲಿರುವ ಉಪ ಚುನಾ ವಣೆಯಲ್ಲಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ.
ಬಾಬುರಾವ್ ಚಿಂಚನಸೂರು, ಲಕ್ಷ್ಮಣ ಸವದಿ ಹಾಗೂ ಆರ್. ಶಂಕರ್ ರಾಜೀನಾಮೆಯಿಂದ ತೆರವಾಗಿರುವ ಮೂರು ಸ್ಥಾನಗಳಿಗೆ ಜೂ. 30ರಂದು ಉಪಚುನಾವಣೆ ನಡೆಯಲಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ಶೆಟ್ಟರ್ ಕಾಂಗ್ರೆಸ್ ಸೇರಿದ್ದರಿಂದ ಪಕ್ಷಕ್ಕೆ ಬಹಳಷ್ಟು ಅನುಕೂಲಕರವಾಗಿದೆ. ಅವರು ವೈಯಕ್ತಿಕವಾಗಿ ಸೋತಿರ ಬಹುದು, ಆದರೆ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಪಕ್ಷಕ್ಕೆ ಸೇರಿದವರನ್ನು ಕಾಂಗ್ರೆಸ್ ಗೌರವಯುತವಾಗಿ ನಡೆಸಿಕೊಳ್ಳುತ್ತದೆ ಎಂಬ ಸಂದೇಶ ಇಡೀ ದೇಶಕ್ಕೆ ಹೋಗಬೇಕಿದೆ. ಈ ಹಿನ್ನೆಲೆಯಲ್ಲಿ ಶೆಟ್ಟರ್ ಅವರನ್ನು ಮೇಲ್ಮನೆ ಚುನಾ ವಣೆಯ ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇನ್ನುಳಿದ 2 ಸ್ಥಾನಗಳಿಗೆ ಸಚಿವ ಎನ್.ಎಸ್. ಬೋಸ ರಾಜು ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನ ಸೂರ್ ಅಭ್ಯರ್ಥಿಗಳಾಗಲಿದ್ಧಾರೆ ಎನ್ನಲಾಗಿದೆ.