Advertisement

Sandalwood; ಕೋಮಲ್‌-ಜಗ್ಗೇಶ್‌ ಜೊತೆ ಜೊತೆಯಲಿ…:’ಕಾಲಾಯ ನಮಃ’ ಚಿತ್ರದಲ್ಲಿ ನಟನೆ

11:08 AM Sep 05, 2023 | Team Udayavani |

ಕೋಮಲ್‌ ನಾಯಕರಾಗಿ ನಟಿಸುತ್ತಿರುವ “ಕಾಲಾಯ ನಮಃ’ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ. ಈ ಚಿತ್ರದಲ್ಲಿ ಬಹಳ ದಿನಗಳ ನಂತರ ಸಹೋದರರಾದ ಜಗ್ಗೇಶ್‌ ಹಾಗೂ ಕೋಮಲ್‌ ಅಭಿನಯಿಸುತ್ತಿದ್ದಾರೆ. ಇವರಿಬ್ಬರು ಭಾಗವಹಿಸಿರುವ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ಜಾಲಿವುಡ್‌ ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗಿದೆ.

Advertisement

ಕೋಮಲ್‌ ಜೊತೆ ನಟಿಸುತ್ತಿರುವ ಬಗ್ಗೆ ಮಾತನಾಡುವ ನಟ ಜಗ್ಗೇಶ್‌, “ನಾನು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದೇನೆ. ಕೋಮಲ್, ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಅವತ್ತಿನಿಂದ ಹೇಳುತ್ತಿದ್ದೇನೆ. ಕೋಮಲ್‌ ಅದ್ಭುತ ಕಲಾವಿದ ಎಂದು. ಇದರಲ್ಲಿ ನಾನು, ಕೋಮಲ್‌ ಹಾಗೂ ನನ್ನ ಮಗ ಯತಿರಾಜ್‌ ಮೂರು ಜನ ನಟಿಸಿದ್ದೇವೆ. ಇತ್ತೀಚೆಗೆ ಬರುತ್ತಿರುವ ಅನೇಕ ಚಿತ್ರಗಳು ಯಶಸ್ವಿಯಾಗುತ್ತಿದೆ. ಕಾಲಾಯ ನಮಃ ಸಹ ಪ್ರಚಂಡ ಯಶಸ್ಸು ಕಾಣಲಿ’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

“ಇದು ನಮ್ಮ ಸಂಸ್ಥೆಯ ಚಿತ್ರ. ನನ್ನ ಹೆಂಡತಿ ಅನಸೂಯ ಅವರು ನಿರ್ಮಾಪಕರು. “ಕಾಲಾಯ ನಮಃ’ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈಗ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಈ ಹಾಡಿನ ಚಿತ್ರೀಕರಣದಲ್ಲಿ ನಮ್ಮ ಅಣ್ಣ ಜಗ್ಗೇಶ್‌, ನಾನು ಹಾಗೂ ಮುಂಬೈ ನಟಿಯೊಬ್ಬರು ಪಾಲ್ಗೊಂಡಿದ್ದೇವೆ. ಯೋಗರಾಜ್‌ ಭಟ್‌ ಈ ಹಾಡನ್ನು ಬರೆದಿದ್ದಾರೆ. ಎಮಿಲ್‌ ಸಂಗೀತ ನೀಡಿದ್ದಾರೆ. ಭೂಷಣ್‌ ಮಾಸ್ಟರ್‌ ನೃತ್ಯ ಸಂಯೋಜನೆ ಮಾಡುತ್ತಿದ್ದಾರೆ. ನಾಯಕಿಯಾಗಿ ಆಸಿಯಾ ಫಿರ್ದೋಸ್‌ ನಟಿಸಿದ್ದಾರೆ. ಜಗ್ಗೇಶ್‌, ಪ್ರಕಾಶ್‌ ರೈ, ಸುಚೇಂದ್ರ ಪ್ರಸಾದ್‌, ಶೈನ್‌ ಶೆಟ್ಟಿ, ಯತಿರಾಜ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎನ್ನುವುದು ನಟ ಕೋಮಲ್‌ ಮಾತು.

ಚಿತ್ರವನ್ನು ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ. ಈ ಚಿತ್ರವನ್ನು ತಮಿಳಿನ ಮತಿವಣ್ಣನ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ರಾಕೇಶ್‌ ಸಿ ತಿಲಕ್‌ ಛಾಯಾಗ್ರಹಣವಿದೆ.

Advertisement

Udayavani is now on Telegram. Click here to join our channel and stay updated with the latest news.

Next