Advertisement

‘ನಾನು ತಪ್ಪು ಮಾಡಲ್ಲ, ತಲೆಯೂ ಬಾಗಿಸೋಲ್ಲ’: DSS ಅಧ್ಯಕ್ಷ ರಘು ವಿರುದ್ಧ ಜಗ್ಗೇಶ್ ಆಕ್ರೋಶ

01:51 PM Aug 25, 2021 | Team Udayavani |

ಬೆಂಗಳೂರು: ಶಾಲಾ ಮಕ್ಕಳಿಗೆ ಸ್ವೆಟರ್ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದಲ್ಲಿ ಸುಖಾಸುಮ್ಮನೆ ತಮ್ಮ ಹೆಸರು ಎಳೆದು ತಂದಿರುವ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ರಘು ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಇಂದು (ಆ.25) ರಘು ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿರುವ ಜಗ್ಗೇಶ್, ಆ ಪ್ರತಿಗಳನ್ನು ಟ್ವಿಟರಿನಲ್ಲಿ ಶೇರ್ ಮಾಡಿದ್ದಾರೆ. ಬಳಿಕ ಆತನ ವಿರುದ್ಧ ಟ್ವೀಟ್ ಮಾಡಿರುವ ಜಗ್ಗೇಶ್, ಎಲ್ಲೋ ಮಾಡಿದ ವಿಷಯಕ್ಕೆ ನನ್ನ ಹೆಸರು ಏಕೆ ತಂದಿರಿ.ನೀವು ನ್ಯಾಯಪರ ಹೋರಾಟ ಮಾಡಿ ನನ್ನ ಬೆಂಬಲವು ಇರುತ್ತದೆ.ಆದರೆ ನನಗು ಇದಕ್ಕು ಯಾವ ಸಂಬಂಧವಿಲ್ಲ. ಆದರು, ನನ್ನ ಹೆಸರು ಏಕೆ ತಂದಿರಿ. ಯಾವ ಪುರುಷಾರ್ಥಕ್ಕೆ? ಎಂದು ಪ್ರಶ‍್ನಿಸಿರುವ ಅವರು, ನಾನು ತಪ್ಪು ಮಾಡಲ್ಲ ತಲೆಯು ಬಾಗಿಸೋಲ್ಲಾ. ನನ್ನಕೋಟ್ಯಂತರ ಅಭಿಮಾನಿಗಳಿಗೆ ತಪ್ಪು ಸಂದೇಶ ರವಾನಿಸುವ ಕಾರ್ಯ ಮಾಡಿದ್ದೀರಿ ಕ್ಷಮೆಯಿಲ್ಲ ಎಂದು ಗುಡುಗಿದ್ದಾರೆ.

ನಟ ಕೋಮಲ್ ಅವರು ಶಾಲಾ ಮಕ್ಕಳ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆಂದು ಆರೋಪಿಸಿ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬಿಬಿಎಂಪಿ ಕಚೇರಿ ಮುಂಭಾಗ ಸಮಿತಿ ಅಧ್ಯಕ್ಷ ಡಾ.ಸಿ.ಎಸ್.ರಘು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರು.

ಪಾಲಿಕೆ ಶಾಲಾ, ಕಾಲೇಜುಗಳಲ್ಲಿ ದಲಿತ, ಹಿಂದುಳಿದ ಮತ್ತು ಕಡು ಬಡವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದಾರೆ. 2020-21ನೆ ಸಾಲಿನಲ್ಲಿ ಪಾಲಿಕೆ ಮಕ್ಕಳಿಗೆ ಸ್ವೆಟರ್‍ಗಳನ್ನು ನೀಡಲು ಅನುದಾನ ಮೀಸಲು ಇಟ್ಟಿರುತ್ತಾರೆ. ಆದರೆ, ಪಾಲಿಕೆಯ ಕೆಲ ಅಧಿಕಾರಿಗಳು ಟೆಂಡರ್ ಕರೆಯದೇ 4ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‍ಗಳನ್ನು ಸರಬರಾಜು ಮಾಡಲು ಆದೇಶ ನೀಡಿದ್ದಾರೆ.

ಕಳೆದ ಸಾಲಿನಲ್ಲಿ ಕೋವಿಡ್ ಸಾಂಕ್ರಮಿಕ ರೋಗದ ಕಾರಣದಿಂದ ಶಾಲಾ, ಕಾಲೇಜು ಬಂದ್ ಮಾಡಲಾಗಿತ್ತು. ಆದರೆ, ಸ್ವೆಟರ್‍ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು 1.76 ಕೋಟಿ ರೂ.ಹಣವನ್ನು ಪಾವತಿ ಮಾಡಲಾಗಿದೆ. ಅಂದಾಜು 16 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಸ್ವೆಟರ್‍ಗಳನ್ನು ವಿತರಣೆ ಮಾಡದೇ ಈ ಯೋಜನೆಯಲ್ಲಿ ಪಾಲಿಕೆ ಅಧಿಕಾರಿಗಳು ಹಣವನ್ನು ಲೂಟಿ ಮಾಡಿದ್ದಾರೆಂದು ರಘು ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next