Advertisement
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಅವರ 115ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಇಡೀ ದೇಶವನ್ನು ಕಾಂಗ್ರೆಸ್ ಸಾಮಾಜಿಕ ನೆಲೆಗಟ್ಟಿನ ಮೇಲೆ ಅಭಿವೃದ್ಧಿಪಡಿಸಿತ್ತು. ಆದರೆ ಇಂದು ದೇಶದಲ್ಲಿ ಅಭಿವೃದ್ಧಿ ಗಿಂತ ಅರಾಜಕತೆ ತೀವ್ರವಾಗಿದೆ ಎಂದು ಆರೋಪಿಸಿದರು.
Related Articles
Advertisement
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತ ನಾಡಿ, ಚಿಕ್ಕ ವಯಸ್ಸಿನಲ್ಲಿಯೇ ರಾಜಕೀಯ ಪ್ರವೇಶಿಸಿ ನೆಹರು ಸಂಪುಟದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಸಚಿವರಾಗಿ ಮಹತ್ವದ ಖಾತೆಗಳನ್ನು ನಿಭಾಯಿಸಿದ ಬಾಬು ಜಗಜೀವನ್ ರಾಂ, ನೀರಾವರಿ, ಆಹಾರ ಭದ್ರತೆಗೆ ಒತ್ತು ಕೊಟ್ಟವರು. ಅನ್ಯ ಕಾರಣಕ್ಕೆ ಕಾಂಗ್ರೆಸ್ ತೊರೆದು ಬೇರೆ ಪಕ್ಷ ಕಟ್ಟಿ, ಕೊನೆಗೆ ಕಾಂಗ್ರೆಸ್‌ಗೆ ಮರಳಿದ ಬಾಬೂಜಿ, ಕಾಂಗ್ರೆಸ್‌ನಿಂದ ಮಾತ್ರ ದಲಿತರಿಗೆ ರಕ್ಷಣೆ ಎಂಬುದನ್ನು ಅಂದೇ ಮನ ಗಂಡಿದ್ದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗಳಾದ ವಿಜಯಕುಮಾರ್, ಆಟೋ ರಾಜು, ಕೆಂಪಣ್ಣ, ಮುಖಂಡರಾದ ಸಿದ್ದಲಿಂಗೇಗೌಡ, ನ್ಯಾತೇಗೌಡ, ಸುಜಾತ, ನಾಗವೇಣಿ, ಮಂಜುನಾಥ್, ಚಂದ್ರಶೇಖರ್ ಗೌಡ, ಸಂಜೀವ್ ಕುಮಾರ್, ಶಿವಾಜಿ, ನಟರಾಜು, ಶೆಟ್ಟಾಳಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾಂಗ್ರೆಸ್ ದ್ವಂದ್ವ ನಿಲುವು ಸರಿಯಲ್ಲ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಅಲ್ಪಸಂಖ್ಯಾತರ ಹೆಗಲ ಮೇಲೆ ಬಂದೂಕು ಇಟ್ಟು, ದಲಿತರನ್ನು ಹೊಡೆಯಲು ಹೊರಟಿದೆ. ಈ ಬಗ್ಗೆ ಎಲ್ಲಾ ಪಕ್ಷದಲ್ಲಿರುವ ದಲಿತ ರಾಜಕಾರಣಿ ಗಳು ಆತ್ಮಾವಲೋಕನ ಮಾಡಿಕೊಳ್ಳ ಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕೋಮುಭಾವನೆ ಕೆರಳಿಸುವ ಕೆಲಸವನ್ನು ವ್ಯವಸ್ಥಿತವಾಗಿ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ಮಾಡುತ್ತಿದ್ದರೂ, ಕಾಂಗ್ರೆಸ್ ಮೌನಕ್ಕೆ ಶರಣಾಗಿರುವುದು ಸರಿಯಲ್ಲ. ಈ ರೀತಿಯ ದ್ವಂದ್ವ ನಿಲುವನ್ನು ತಕ್ಷಣವೇ ಕೈಬಿಟ್ಟು, ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ತಡೆಯಬೇಕೆಂದು ಆಗ್ರಹಿಸಿದರು.