Advertisement

ದೇಶದ ಅಭಿವೃದ್ದಿಗೆ ಬಾಬೂಜಿ ಕೊಡುಗೆ ಅಪಾರ: ವೈ.ಕೆ.ತಿಮ್ಮೇಗೌಡ

05:55 PM Apr 05, 2022 | Team Udayavani |

ಪಿರಿಯಾಪಟ್ಟಣ: ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಬಾಬೂಜಿ ಅವರ ಮುಖ್ಯ ಉದ್ದೇಶವಾಗಿತ್ತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ತಿಳಿಸಿದರು.

Advertisement

ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರಾಗಿ ಮಾತನಾಡಿದರು.

ಡಾ.ಬಾಬು ಜಗಜೀವನ್ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಕೃಷಿ, ರೇಷ್ಮೆ, ರಕ್ಷಣೆ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಲು ಹೋರಾಟ ಮಾಡಿ ಯಶಸ್ವಿಯಾಗಿ ಹಸಿರುಕ್ರಾಂತಿ ಹರಿಕಾರರಾದ ಇವರು, ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದರು.

ಶಾಸಕ ಕೆ.ಮಹದೇವ್ ಮಾತನಾಡಿ ಹಸಿರು ಕ್ರಾಂತಿ ಹರಿಕಾರ, ಕಾರ್ಮಿಕ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರು, ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು. ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಂಡು ಅವರ ಸಾಧನೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇಂದಿನ ಯುವ ಪೀಳಿಗೆ ಇಂಥ ಮಹಾನ್ ಪುರುಷರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮಾಜಿ ತಾಪಂ ಅಧ್ಯಕ್ಷ ಐಲಾಪುರ ರಾಮು ಮಾತನಾಡಿ ಆಧುನಿಕ ಭಾರತದ ನಿರ್ಮಾಣ ಮತ್ತು ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ, ಹಸಿರು ಕ್ರಾಂತಿಯ ಹರಿಕಾರ ಬಾಬೂಜಿಯವರಿಗೆ ದೇಶದ ಪ್ರಧಾನ ಮಂತ್ರಿಯಾಗುವ ಎಲ್ಲ ಅವಕಾಶಗಳಿದ್ದರೂ ದಲಿತ ಎಂಬ ಕಾರಣಕ್ಕೆ ಅವರನ್ನು ಆ ಹುದ್ದೆಯಿಂದ ಸಂಚಿನ ಮೂಲಕ ಹೊರ ಇಟ್ಟರು. ಜಾತಿ ಅವರನ್ನು ಅವರ ಜನ್ಮದಿನದಂದು ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸುವುದು ಎಲ್ಲರ ಆಧ್ಯ ಕರ್ತವ್ಯ ಎಂದರು.

Advertisement

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ.ಚಂದ್ರಮೌಳಿ ಮಾತನಾಡಿ ಬುದ್ಧ, ಬಸವ ವಿಚಾರಧಾರೆಗಳೊಂದಿಗೆ ಪ್ರೇರಿತರಾದ ಬಾಬೂಜಿಯವರು ದೇಶದ ಕಟ್ಟಕಡೆಯ ಸಮುದಾಯದ ಹಿತರಕ್ಷಣೆಗಾಗಿ ಶ್ರಮಿಸಿದವರು. ಕೃಷಿ ಕ್ಷೇತ್ರದಲ್ಲಿ ಅನೇಕ ವೈಜ್ಞಾನಿಕ ಬದಲಾವಣೆಗಳ ಮೂಲಕ ದೇಶದ ಆಹಾರ ಸಮಸ್ಯೆ ನಿವಾರಿಸುವ ಮಹತ್ವದ ನಿರ್ಣಯ ಇವರನ್ನು ಅಜಾರಾಮರಗೊಳ್ಳುವಂತೆ ಮಾಡಿದೆ. ಬಾಬೂಜಿಯವರು ರಕ್ಷಣಾ ಸಚಿವರಾಗಿದ್ದ ಅವಧಿಯಲ್ಲಿ ಮೊಟ್ಟ ಮೊದಲ ಬಾರಿಗೆ ನಿವೃತ್ತ ಸೈನಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತಂದ ಮಹಾನ್ ನಾಯಕರು. ಇಂತಹ ನಾಯಕರ ಜೀವನ ಶೈಲಿ ಮತ್ತು ಆಡಳಿತ ವ್ಯವಸ್ಥೆಯನ್ನು ಇಂದಿನ ಯುವಕರು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಹಂಗಾಮಿ ಅಧ್ಯಕ್ಷೆ ನಾಗರತ್ನ, ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ,  ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್,  ಸಿಪಿಐ ಜಗದೀಶ್, ಆರೋಗ್ಯಾಧಿಕಾರಿ ಶರತ್ ಬಾಬು, ಎಇಇಗಳಾದ ಪ್ರಭು, ಮಂಜುನಾಥ್, ಜಯಂತ್, ಸಿಡಿಪಿಒ ಮಮತಾ, ಎಡಿಎಲ್ಆರ್ ಚಿಕ್ಕಣ್ಣ, ತೋಟಗಾರಿಕೆ ಸಹಾಯಕ ಅಧಿಕಾರಿ ಪ್ರಸಾದ್, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹಾಜರದ್ದರು.

Advertisement

Udayavani is now on Telegram. Click here to join our channel and stay updated with the latest news.

Next