Advertisement
ಏಪ್ರಿಲ್ 5ರಂದು ಜಗಜೀವನರಾಂ ಮತ್ತು ಏ. 14ರಂದು ಡಾ| ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಯಂತ್ಯುತ್ಸವ ಪೂರ್ವಭಾವಿ ಸಿದ್ಧತಾ ಸಭೆಯು ಸರ್ವಾನುಮತದ ನಿರ್ಣಯಕೈಗೊಂಡಿತು.
Related Articles
Advertisement
ಏಪ್ರಿಲ್ 14 ರಂದು ಬೆಳಗ್ಗೆ ಜಗತ್ ವೃತ್ತದ ಬಳಿಯ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿ ಬಳಿ 128ನೇ ಜಯಂತ್ಯುತ್ಸವ ಅಂಗವಾಗಿ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಅಂದು ಬೆಳಗ್ಗೆ 8:30 ಗಂಟೆಗೆ ಮಾಲಾರ್ಪಣೆ ಬಳಿಕ ಸಮಾರಂಭ ಜರುಗುವುದು. ಈ ಎರಡೂ ಜಯಂತಿಗಳ ಆಚರಣೆಗೆ ಸಂಬಂಸಿದಂತೆ ರಚಿಸಲಾದ ಎಲ್ಲ ಉಪಸಮಿತಿಗಳಿಗೆ ವಹಿಸಲಾದ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಜವಾಬ್ದಾರಿಯಿಂದ ಕೈಗೊಳ್ಳಬೇಕು. ಜಯಂತಿ ಆಚರಣೆಯ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್ ಅಲಂಕಾರ, ಧ್ವನಿವರ್ಧಕ, ಸ್ವತ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅದೇ ರೀತಿ ಮದ್ಯ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕುಎಂದರು.
ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಏಪ್ರಿಲ್ 5 ರಂದು ಬಾಬು ಜಗಜೀವನರಾಂ ಮತ್ತು ಏಪ್ರಿಲ್ 14ರಂದು ಡಾ| ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಿ ಆಚರಣೆ ಮುಖ್ಯ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು. ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಯಂತ್ಯೋತ್ಸವ ಆಚರಣೆ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.