Advertisement
ಪೊಲೀಸರ ಉಲ್ಲೇಖಿಸಿ ಎಎನ್‌ಐ ವರದಿಯಂತೆ 28 ವರ್ಷದ ಸೋನು ಚಿಕ್ನಾ ಉತ್ತರ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿಯ ಸಂದರ್ಭದಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಯಾಗಿದ್ದಾನೆ.
Related Articles
Advertisement
ಈ ನಡುವೆ ಸೋಮವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, 36 ವರ್ಷದ ಆರೋಪಿ ಶೇಖ್ ಹಮೀದ್ ಸ್ಕ್ರ್ಯಾಪ್ ಡೀಲರ್ ಆಗಿದ್ದು, ಜಹಾಂಗೀರ್‌ಪುರಿ ಹಿಂಸಾಚಾರದ ಸಂದರ್ಭದಲ್ಲಿ ಎಸೆಯಲು ಬಳಸಿದ ಬಾಟಲಿಗಳನ್ನು ತಾನು ಸರಬರಾಜು ಮಾಡಿದ್ದನ್ನು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾನೆ.
ಇದನ್ನೂ ಓದಿ: ಹಿಂದೂ ದಂಪತಿಗಳು ತಲಾ 4 ಮಕ್ಕಳನ್ನು ಹುಟ್ಟಿಸಿ : ಸಾಧ್ವಿ ರಿತಂಬರಾ
ಇಲ್ಲಿಯವರೆಗೆ, ದೆಹಲಿ ಪೊಲೀಸರು ಘರ್ಷಣೆಯ ಹಿಂದಿನ “ಮುಖ್ಯ ಸಂಚುಕೋರರು” ಮತ್ತು ಸಬ್ ಇನ್ಸ್‌ಪೆಕ್ಟರ್‌ಗೆ ಗುಂಡು ಹಾರಿಸಿದ ವ್ಯಕ್ತಿ ಸೇರಿದಂತೆ 22 ಜನರನ್ನು ಬಂಧಿಸಿದ್ದಾರೆ.
ಹಿಂಸಾಚಾರ ಕುರಿತು ಕ್ರೈಂ ಬ್ರ್ಯಾಂಚ್ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗಾಗಿ 14 ತಂಡಗಳನ್ನು ರಚಿಸಲಾಗಿದೆ. ಇಂದು ಘಟನೆ ನಡೆದ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ನಾಲ್ಕು ತಂಡ ಭೇಟಿ ನೀಡಿದ್ದು, ಸ್ಯಾಂಪಲ್ಸ್ ಸಂಗ್ರಹಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಮಾದರಿಯಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.