ತೀರ್ಥಹಳ್ಳಿ : ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ನಡುವೆಯೂ ರಾಜ್ಯ ಸರ್ಕಾರ ರಾಜ್ಯದ ಜನರ ಬದುಕನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಜನರ ವಿಶ್ವಾಸವನ್ನು ಗಳಿಸಿದೆ. ಈ ಹಿನ್ನಲೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವು ಸೇರಿದಂತೆ ನಮ್ಮ ಪಕ್ಷದ ಅಭ್ಯರ್ಥಿ ಪರ ಮತದಾರರ ಒಲವು ವ್ಯಕ್ತವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಜೈ ಕುಮಾರ್ ತಿಳಿಸಿದರು.
ಸೋಮವಾರ ಪಟ್ಟಣದ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ ಗ್ಯಾರೆಂಟಿ ಯೋಜನೆಯನ್ನು ಒಂದು ತಿಂಗಳ ಒಳಗಾಗಿ ಜನರಿಗೆ ತಲುಪುವ ಹಾಗೆ ಮಾಡಿದೆ. ಐದು ಗ್ಯಾರೆಂಟಿ ಜೊತೆಗೆ ಈ ಚುನಾವಣೆಗೆ ಸಂಬಂಧಪಟ್ಟಂತೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷದ ಹಾಗೆ 8,335 ಕೋಟಿ ಕೊಡಲು ಬದ್ದವಾಗಿದೆ.
ಕರ್ನಾಟಕ ರಾಜ್ಯದಿಂದ ತೆರಿಗೆ ಕಲೆಕ್ಟ್ ಮಾಡಿ ಬಿಜೆಪಿ ಪಕ್ಷ ಇರುವ ರಾಜ್ಯಗಳಿಗೆ ಬಿಡುಗಡೆ ಮಾಡಿ ಕಾಂಗ್ರೆಸ್ ಇರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ವಂಚನೆ ಮಾಡುತ್ತಿದೆ. ಇಲ್ಲಿಯವರೆಗೆ ಕರ್ನಾಟಕ ರಾಜ್ಯಕ್ಕೆ 3 ಸಾವಿರ ಕೋಟಿ ಮಾತ್ರ ನೀಡಿದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ಕೇಂದ್ರ ಸರ್ಕಾರ ಮಾಡುತ್ತಿದೆ. ಸುಳ್ಳಿನ ಭರವಸೆ ಮೂಲಕ ಖಾಲಿ ಚೊಂಬಿನ ಆಶ್ವಾಸನೆಯನ್ನು ಬಿಜೆಪಿ ನೀಡುತ್ತಿದೆ.
36 ಸಾವಿರ ಕೋಟಿ ಹಣ ಗ್ಯಾರೆಂಟಿ ಯೋಜನೆಯಿಂದ ಜನರಿಗೆ ತೊಂದರೆ ಆಗುತ್ತಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಮಹಿಳಾ ಸಬಲೀಕರಣ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಬಿಜೆಪಿ ಆಡಳಿತದಲ್ಲಿ ಮಹಿಳೆಯರು ಸಂಕಷ್ಟದಲ್ಲಿದ್ದರು. ನೀವು ಅಧಿಕಾರದಲ್ಲಿ ಇದ್ದಾಗ ಮಹಿಳೆಯರ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಏಕೆ ಮಾಡಲಿಲ್ಲ ನಿರುದ್ಯೋಗ ಸಮಸ್ಯೆ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗದ ಭರವಸೆ ನೀಡಿತ್ತು. ಅದರ ಪ್ರತಿಯಾಗಿ 20 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಹಾಗೂ ಯುವನಿಧಿ ಯೋಜನೆಯಿಂದ ಜನರಿಗೆ ಅನುಕೂಲ ಆಗಿದೆ. ನಾಗರಿಕರ ಬದುಕನ್ನು ಹಾಸನಾಗಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಒಂದು ರೂ ತೆರಿಗೆ ಹಣವನ್ನು ಸಂಗ್ರಹ ಮಾಡಿ 15 ಪೈಸೆ ವಾಪಾಸ್ ನೀಡುತ್ತಿದ್ದೀರಾ ಆದರೆ ಬಿಜೆಪಿ ಆಡಳಿತ ಇರುವ ರಾಜ್ಯಕ್ಕೆ ಐದು ಪಟ್ಟು ಹಣ ನೀಡುತ್ತಿದ್ದೀರಾ, ಕರ್ನಾಟಕ ಬರ ಪರಿಹಾರಕ್ಕೆ 18 ಸಾವಿರ ಕೋಟಿ ಕೇಳಿದ್ದು ಕೇವಲ 3000 ಕೋಟಿ ಹಣ ಬಿಡುಗಡೆ ಮಾಡಿದ್ದೀರಾ ಇದೆಲ್ಲವೂ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯ ಎಂದು ಕುಮಾರಸ್ವಾಮಿ ಅವರಿಗೆ ಕಾಣಿಸುವುದಿಲ್ಲವೇ ಎಂದು ಪ್ರೆಶ್ನೆ ಮಾಡಿದರು.
ಗೋಮಾಂಸದ ಭಕ್ಷಣೆ ವಿಚಾರದಲ್ಲಿ ನಾವು ಯಾರಿಗೂ ಉತ್ತೇಜನ ನೀಡುತ್ತಿಲ್ಲ. ಆಹಾರ ಪದ್ಧತಿ ಅವರರವರ ವಿಚಾರ, ಕಾಂಗ್ರೆಸ್ ಯಾವುದೇ ಜಾತಿ ಧರ್ಮದ ಆಚರಣೆ ವಿಷಯದಲ್ಲಿ ಹಸ್ತ ಕ್ಷೇಪ ಮಾಡುವುದಿಲ್ಲ. ಎಸ್ ಸಿ ಎಸ್ ಟಿ ಮೀಸಲಾತಿ ಬಗ್ಗೆ ಮಾತನಾಡಿ ಕೇವಲ ಬುಕ್ ಅಡ್ಜಸ್ಟ್ ಮೆಂಟ್, ಇದಕ್ಕೆ 27 ಸಾವಿರ ಕೋಟಿ ಮೀಸಲು ಇಡಲಾಗಿದ್ದು 11 ಸಾವಿರ ಕೋಟಿ ಬಳಸಲಾಗಿದೆ. ಅಗತ್ಯ ಬಿದ್ದಾಗ ಹಣವನ್ನು ತುಂಬಿಸಲಾಗುತ್ತದೆ ಎಂದರು.
ಶಿವಮೊಗ್ಗ ಸೇರಿದಂತೆ ಈ ಬಾರಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತೇವೆ ಅದರಲ್ಲಿ ಯಾವುದೇ ರೀತಿಯಲ್ಲಿ ಅನುಮಾನವಿಲ್ಲ ಎಂದರು.
ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್, ಆರ್ ಎಂ ಮಂಜುನಾಥ್ ಗೌಡ, ಕೆಸ್ತೂರು ಮಂಜುನಾಥ್, ಮುಡಬಾ ರಾಘವೇಂದ್ರ, ಅಮರನಾಥ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದನ್ನೂ ಓದಿ: Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು