Advertisement

INDvsPAK; ರಿಜ್ವಾನ್ ಎದುರಲ್ಲಿ ‘ಜೈ ಶ್ರೀರಾಮ್’ ಘೋಷಣೆ; ಕಿಡಿಕಾರಿದ ಉದಯನಿಧಿ ಸ್ಟಾಲಿನ್

11:15 AM Oct 15, 2023 | Team Udayavani |

ಅಹಮದಾಬಾದ್/ಚೆನ್ನೈ: ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯ ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆಯಿತು. ಬಾಬರ್ ಅಜಂ ಪಡೆಯನ್ನು ಸುಲಭವಾಗಿ ಸೋಲಸಿದ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ನೆಗೆಯಿತು.

Advertisement

ಈ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ ಗೆ ತೆರಳುತ್ತಿದ್ದಾಗ ಪ್ರೇಕ್ಷಕರು “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗುವ ವೀಡಿಯೊಗಳು ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ‘’ಅಭಿಮಾನಿಗಳ ವರ್ತನೆ ಸ್ವೀಕಾರಾರ್ಹವಲ್ಲ” ಎಂದಿದ್ದಾರೆ.

ಎಕ್ಸ್ ಜಾಲತಾಣದಲ್ಲಿ (ಟ್ವಿಟ್ಟರ್) ಪೋಸ್ಟ್ ಹಾಕಿರುವ ಉದಯನಿಧಿ ಸ್ಟಾಲಿನ್, “ಭಾರತವು ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಆದರೆ ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರಿಗೆ ನೀಡಿದ ಆತಿಥ್ಯ ಸ್ವೀಕಾರಾರ್ಹವಲ್ಲ. ಕ್ರೀಡೆಗಳು ಏಕೀಕರಣಗೊಳ್ಳುವಂತೆ ಮಾಡಬೇಕು. ದೇಶಗಳ ನಡುವೆ ಬಲ, ನಿಜವಾದ ಸಹೋದರತ್ವವನ್ನು ಬೆಳೆಸಬೇಕು, ಆದರೆ ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಖಂಡನೀಯ” ಎಂದಿದ್ದಾರೆ.

ಪಾಕಿಸ್ತಾನದ ವಿಕೆಟ್‌ ಕೀಪರ್ ಬ್ಯಾಟರ್ ರಿಜ್ವಾನ್ 69 ಎಸೆತಗಳಲ್ಲಿ 49 ರನ್ ಗಳಿಸಿ ಔಟಾದರು. ನಂತರ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗುತ್ತಿದ್ದಾಗ ಪ್ರೇಕ್ಷಕರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವುದನ್ನು ವೀಡಿಯೊದಲ್ಲಿ ಕಾಣಬಹುದು.

Advertisement

ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರು ಮಾತನಾಡುತ್ತಿದ್ದ ವೇಳೆಯೂ ಅಭಿಮಾನಿಗಳು ಕೂಡ ಬೊಬ್ಬೆ ಹೊಡೆದರು.

ಭಾರತವು ಏಳು ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಬಾಬರ್ ಅಜಮ್‌ ಗೆ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.

ಸತತ ಮೂರು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next