Advertisement

ದೇಶಾದ್ಯಂತ 9ರಂದು ಜೈಲ್‌ ಭರೋ ಚಳವಳಿ: ಬಸವರಾಜ

03:27 PM Aug 04, 2018 | Team Udayavani |

ಸುರಪುರ: ಕೇಂದ್ರ ಸರಕಾರದ ಕೃಷಿ ಮತ್ತು ಜನವಿರೋಧಿ ಹಾಗೂ ಆರ್ಥಿಕ ನೀತಿ ಖಂಡಿಸಿ ಅತಿವೃಷ್ಟಿ, ಅನಾವೃಷ್ಟಿ ಪರಿಹಾರ ಹಾಗೂ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕರ್ನಾಟಕ ಪ್ರಾಂತ ರೈತ ಸಂಘ ಆಗಸ್ಟ 9ರಂದು ದೇಶಾದ್ಯಂತ ಜೈಲ್‌ ಭರೋ ಚಳವಳಿ ಹಮ್ಮಿಕೊಕೊಂಡಿದೆ ಎಂದು ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಹೇಳಿದರು.

Advertisement

ನಗರದಲ್ಲಿ ಗುರುವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕಪ್ಪು ಹಣ ತಂದು ಪ್ರತಿ ರೈತನ ಬ್ಯಾಂಕ್‌ ಖಾತೆಗೆ 15 ಲಕ್ಷ ರೂ. ಹಣ ಜಮೆ ಮಾಡುತ್ತೇನೆ. ವಿದ್ಯುತ್‌ ಸಮಸ್ಯೆ ನಿವಾರಿಸಿ ಕೃಷಿ ವಲಯಕ್ಕೆ ಆದ್ಯತೆ ನೀಡುತ್ತೇನೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಅನೇಕ
ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ರೈತರ ಆತ್ಮಹತ್ಯೆ, ದಲಿತ, ಅಲ್ಪ ಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿವೆ. ಗುಳೆ ವ್ಯಾಪಕವಾಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನ ನೀಡುತ್ತಿಲ್ಲ. ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಮಿಕರನ್ನು ಒಕ್ಕಲೆಬಿಸುವ ಹುನ್ನಾರು ನಡೆದಿದೆ. ಒಟ್ಟಾರೆ ಕೇಂದ್ರ ಸರಕಾರ ಅನುಸರಿಸುತ್ತಿರುವ ಜನವಿರೋಧಿ ನೀತಿಯನ್ನು ಹಿಮ್ಮೆಟಿಸಲು ಚಳವಳಿ ಹಮ್ಮಿಕೊಳ್ಳಲಾಗಿದೆ
ಎಂದು ತಿಳಿಸಿದರು. 

ಸಂಘದ ಜಿಲ್ಲಾ ಪ್ರಮುಖ ಚನ್ನಪ್ಪ ಆನೆಗುಂದಿ ಮಾತನಾಡಿ, ಹೈ.ಕ ಭಾಗದಲ್ಲಿ ಈ ವರ್ಷ ಮಳೆ ಕೈ ಕೊಟ್ಟಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಈ ಭಾಗದ ಸಚಿವರು, ಶಾಸಕರು, ಸಂಸದರಿಗೆ ಈ ವಾಸ್ತವಿಕ ಸತ್ಯ ಅರಿಗೆ ಇದ್ದರೂ ಈ ಬಗ್ಗೆ ಸದನದಲ್ಲಿ ಇವರ್ಯಾರು ಚಕಾರ ಎತ್ತದಿರುವುದು ನಾಚಿಕೆಗೇಡು ಸಂಗತಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್‌.ಎಂ. ಸಾಗರ ಮಾತನಾಡಿ, ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು. ಭತ್ತಕ್ಕೆ 2,500 ರೂ.
ತೊಗರಿಗೆ 6500 ರೂ. , ಬೆಂಬಲ ಬೆಲೆ ಘೋಷಿಸಬೇಕು. ನಿವೇಶನ ರಹಿತರಿಗೆ ಮನೆ ನೀಡಬೇಕು. ಪಶುಪಾಲನೆ, ಹೈನುಗಾರಿಕೆಗೆ ಅಗತ್ಯ ನೆರವು ನೀಡಬೇಕು. ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ, ಭೂರಹಿತರಿಗೆ 5 ಎಕರೆ ಭೂಮಿ ನೀಡಬೇಕು. 

Advertisement

ಖಾತ್ರಿ ಯೋಜನೆ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಆಗಸ್ಟ 9ರಂದು ಜೈಲ್‌ ಬರೋ ಚಳವಳಿ ಹಮ್ಮಿಕೊಳ್ಳಲಾಗಿದೆ. ಕಾರಣ ಪ್ರತಿ ತಾಲೂಕಿನಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಳವಳಿಯಲ್ಲಿ
ಭಾಗವಹಿಸಬೇಕು ಎಂದು ಮನವಿ ಮಾಡಿದರು. ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕರ ಸ್ವಾಗತಿಸಿದರು. ತಾಲೂಕು ಅಧ್ಯಕ್ಷ ಧರ್ಮಣ ದೊರೆ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next