Advertisement
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೈಗೊಂಡ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ 2016 ಮಾರ್ಚ ತಿಂಗಳಲ್ಲಿ ಅಂದಾಜು 72 ಕೋಟಿ ರೂ.ಗಳ ವೆಚ್ಚದ ಟೆಂಡರ್ ಜೈನ್ ಕಂಪನಿಗೆ ನೀಡಿದ್ದು, 2021ಕ್ಕೆ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಪ್ರಗತಿ ಮಂದಗತಿಯಲ್ಲಿ ನಡೆದಿದ್ದು, ಕಾಮಗಾರಿ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ ಜೈನ್ ಕಂಪನಿಯನ್ನು ರಾಜ್ಯದಲ್ಲಿ ಕಪ್ಪು ಪಟ್ಟಿಗೆ ಸೇರ್ಪಡೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
Related Articles
Advertisement
ಇದನ್ನೂ ಓದಿ: ಈ ಆಟಗಾರ ಐಪಿಎಲ್ ನಲ್ಲಿ ದ್ವಿಶತಕ ಬಾರಿಸಬಲ್ಲ: ಕೆಕೆಆರ್ ಆಟಗಾರನ ಕೊಂಡಾಡಿದ ಡೇವಿಡ್ ಹಸ್ಸಿ
ಮುಧೋಳ ಮತ್ತು ಮಹಾಲಿಂಗಪೂರ ನಗರಕ್ಕೆ ಘಟಪ್ರಭಾ ನದಿಯಿಂದ ಸಮರ್ಪಕವಾರಿ ನೀರು ಪೂರೈಸಲು ಸಾದ್ಯವಾಗದ ಕಾರಣ ಶಾಶ್ವತವಾಗಿ ನೀರು ಪೂರೈಸುವ ನಿಟ್ಟಿನಲ್ಲಿ ಕೃಷ್ಣಾ ನದಿಯಿಂದ ನೀರು ತರಲು ಅಂದಾಜು 80 ಕೋಟಿ ರೂ.ಗಳ ವೆಚ್ಚವಾಗಲಿದ್ದು, ಅನುದಾನ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು. ಕಮತಗಿ ಮತ್ತು ಅಮೀನಗಡ ಪಟ್ಟಣಕ್ಕೆ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಡಿಪಿಆರ್ ತಯಾರಿಸಿ ಕಳುಹಿಸಲು ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ ಅವರು ವಿವಿಧ ಬೇಡಿಕೆಗಳನ್ನು ಸಚಿವರ ಮುಂದೆ ಪ್ರಸ್ತಾಪಿಸಿದರು.
ಜಿಲ್ಲಾ ನಗರಾಭಿವೃದ್ದಿ ಕೋಶದ ಕಾರ್ಯಪಾಲಕ ಅಭಿಯಂತರ ಎಸ್.ಸಿ.ಓಣಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ವರದಿಯನ್ನು ವಿವರವಾಗಿ ಸಭೆಯ ಮುಂದಿಟ್ಟರು. ಸಭೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು ಉಪಸ್ಥಿತರಿದ್ದರು.