ವಿಶ್ವಸಂಸ್ಥೆ: ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತವು ಬಲವಾಗಿ ತಿರುಗೇಟು ನೀಡಿದೆ. ಅಲ್-ಖೈದಾ ನಾಯಕ ಒಸಾಮಾ ಬಿನ್ ಲಾಡೆನ್ ಗೆ ಆತಿಥ್ಯ ನೀಡಿದ ಮತ್ತು ನೆರೆ ದೇಶದ ಸಂಸತ್ತಿನ ಮೇಲೆ ದಾಳಿ ಮಾಡಿದ ದೇಶವು “ಪ್ರವಚನ” ಮಾಡುವ ಅರ್ಹತೆಯನ್ನು ಹೊಂದಿಲ್ಲ ಎಂದು ಖಡಕ್ ಉತ್ತರ ನೀಡಿದೆ.
ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಯು ಸಾಂಕ್ರಾಮಿಕ ರೋಗಗಳು, ಹವಾಮಾನ ಬದಲಾವಣೆ, ಸಂಘರ್ಷಗಳು ಅಥವಾ ಭಯೋತ್ಪಾದನೆ ನಮ್ಮ ಕಾಲದ ಪ್ರಮುಖ ಸವಾಲುಗಳಿಗೆ ಅದರ ಪರಿಣಾಮಕಾರಿ ಪ್ರತಿಕ್ರಿಯೆಯನ್ನು ಅವಲಂಬಿಸಿರುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
“ನಾವು ಇಂದು ಬಹುಪಕ್ಷೀಯತೆಯನ್ನು ಸುಧಾರಿಸುವ ತುರ್ತುಸ್ಥಿತಿಯ ಮೇಲೆ ಗಮನಹರಿಸಿದ್ದೇವೆ. ನಾವು ನಮ್ಮ ನಿರ್ದಿಷ್ಟ ಅಭಿಪ್ರಾಯವನ್ನು ಹೊಂದಿದ್ದೇವೆ” ಎಂದು ಜೈಶಂಕರ್ ಹೇಳಿದರು.
ಇದನ್ನೂ ಓದಿ:ನಾಯಕತ್ವ ತೊರೆದ ನ್ಯೂಜಿಲ್ಯಾಂಡ್ ನ ಕೇನ್ ವಿಲಿಯಮ್ಸನ್: ನೂತನ ಕ್ಯಾಪ್ಟನ್ ನೇಮಕ
“ನಾವು ಉತ್ತಮ ಪರಿಹಾರಗಳನ್ನು ಹುಡುಕುತ್ತಿರುವ ಸಂದರ್ಭದಲ್ಲಿ ಅಂತಹ ಬೆದರಿಕೆಗಳನ್ನು ಎಂದಿಗೂ ಒಪ್ಪಿಕೊಳ್ಳಬಾರದು. ಜಗತ್ತು ಸ್ವೀಕಾರಾರ್ಹವಲ್ಲ ಎಂದು ಪರಿಗಣಿಸುವದನ್ನು ಸಮರ್ಥಿಸುವ ಪ್ರಶ್ನೆಯೂ ಉದ್ಭವಿಸಬಾರದು. ಇದು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವವರಿಗೆ ಖಂಡಿತವಾಗಿಯೂ ಅನ್ವಯಿಸುತ್ತದೆ. ಒಸಾಮಾ ಬಿನ್ ಲಾಡೆನ್ ಗೆ ಆತಿಥ್ಯ ವಹಿಸುವುದು ಮತ್ತು ನೆರೆಯ ಸಂಸತ್ತಿನ ಮೇಲೆ ದಾಳಿ ಮಾಡುವುದು ಈ ಮಂಡಳಿಯ ಮುಂದೆ ಉಪದೇಶ ಮಾಡುವ ಅರ್ಹತೆಯಾಗಿ ಖಂಡಿತಾ ಕೆಲಸ ಮಾಡುವುದಿಲ್ಲ” ಎಂದು ಅವರು ಹೇಳಿದರು.
ಹದಿನೆಂಟು ವರ್ಷಗಳ ಹಿಂದೆ ಡಿಸೆಂಬರ್ 13 ರಂದು, ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಭಯೋತ್ಪಾದಕರು ನವದೆಹಲಿಯ ಸಂಸತ್ ಸಂಕೀರ್ಣದ ಮೇಲೆ ದಾಳಿ ಮಾಡಿ ಗುಂಡು ಹಾರಿಸಿ ಒಂಬತ್ತು ಜನರ ಹತ್ಯೆಗೆ ಕಾರಣವಾಗಿದ್ದರು.